Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟಿಡಿಪಿಯೊಂದಿಗೆ ಮೈತ್ರಿ ಘೋಷಿಸಿದ ಜನಸೇನಾ ನಾಯಕ ಪವನ್ ಕಲ್ಯಾಣ್

ಅಮರಾವತಿ: ಆಂಧ್ರಪ್ರದೇಶದಲ್ಲಿ ಮುಂದಿನ ವಿಧಾನಸಭಾ ಚುನಾವಣೆಯನ್ನು ಟಿಡಿಪಿಯೊಂದಿಗೆ ಮೈತ್ರಿ ಮಾಡಿಕೊಳ್ಳುವುದಾಗಿ ಜನಸೇನಾ ಪಕ್ಷದ ಮುಖ್ಯಸ್ಥ, ಖ್ಯಾತ ನಟ ಪವನ್ ಕಲ್ಯಾಣ್ ಘೋಷಿಸಿದ್ದಾರೆ.

ಬಹುಕೋಟಿ ಕೌಶಲಾಭಿವೃದ್ಧಿ ನಿಗಮದ ಹಗರಣದಲ್ಲಿ ಬಂಧಿತರಾಗಿರುವ ಟಿಡಿಪಿ ಮುಖ್ಯಸ್ಥ ಎನ್ ಚಂದ್ರಬಾಬು ನಾಯ್ಡು ಅವರನ್ನು ಭೇಟಿಯಾದ ನಂತರ ಅವರು ರಾಜಮಹೇಂದ್ರವರಂ ಕೇಂದ್ರ ಕಾರಾಗೃಹದ ಹೊರಗೆ ಈ ಘೋಷಣೆ ಮಾಡಲಾಗಿದೆ.

ಇನ್ನು ಎನ್ ಚಂದ್ರಬಾಬು ನಾಯ್ಡು ಅವರ ಪುತ್ರ, ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಮತ್ತು ಹಿಂದೂಪುರ ಶಾಸಕ, ಖ್ಯಾತ ನಟ ನಂದಮೂರಿ ಬಾಲಕೃಷ್ಣ ಅವರು ಮೈತ್ರಿ ಮಾತುಕತೆಯಲ್ಲಿ ಭಾಗಿಯಾಗಿ ಪವನ್ ಕಲ್ಯಾಣ್ ಜತೆಗಿದ್ದರು.