Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟೆಸ್ಟ್‌ ಬ್ಯಾಟರ್‌ಗಳ ಶ್ರೇಯಾಂಕ ಪಟ್ಟಿ ಬಿಡುಗಡೆ: 6 ನೇ ಸ್ಥಾನಕ್ಕೇರಿದ ಕೊಹ್ಲಿ

ದುಬೈ: ಅಂತರರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಇತ್ತೀಚಿಗೆ ಟೆಸ್ಟ್ ಬ್ಯಾಟರ್ಗಳ ಶ್ರೇಯಾಂಕದ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಈ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ಅನುಭವಿ ಆಟಗಾರ ವಿರಾಟ್ ಕೊಹ್ಲಿ ಒಂಬತ್ತನೇ ಸ್ಥಾನದಿಂದ ಆರನೇ ಸ್ಥಾನಕ್ಕೆ ತಲುಪಿದ್ದಾರೆ.

ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ ಇತ್ತೀಚಿಗೆ ದಕ್ಷಿಣ ಆಫ್ರಿಕಾದ ವಿರುದ್ದ ನಡೆದ ಸರಣೆ ಪಂದ್ಯಾಟದಲ್ಲಿ ಒಂದು ಅರ್ಧಶತಕ ಸಹಿತ 172 ರನ್ ಗಳಿಸುವ ಮೂಲಕ ತಮ್ಮ ಖಾತೆಯಲ್ಲಿ ೭೭೫ ರೇಟಿಂಗ್ ಪಾಯಿಂಟ್ ಗಳನ್ನು ಹೊಂದಿದ್ದಾರೆ. ಈ ಮೂಲಕ ಅಗ್ರಸ್ಥಾನದ ಕಡೆಗೆ ಮುನ್ನುಗ್ಗಿದ್ದಾರೆ.

ಇನ್ನು ಈ ಮೊದಲು ಶ್ರೇಯಾಂಕದ ಪಟ್ಟಿಯಲ್ಲಿ ಪಾಕಿಸ್ತಾನದ ಆಟಗಾರ ಬಾಬರ್ ಅಜಂ ಆರನೇ ಸ್ಥಾನದಲ್ಲಿದರು. ಆದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ವೈಫಲ್ಯದಿಂದ ಅವರ ಖಾತೆಯಲ್ಲಿ (768) ರೇಟಿಂಗ್ ಪಾಯಿಂಟ್ ಗಳಿದ್ದು, ಎರಡು ಸ್ಥಾನಗಳನ್ನು ಕಳೆದುಕೊಂಡು ಎಂಟನೇ ಸ್ಥಾನಕ್ಕೆ ಕುಸಿದಿದ್ದಾರೆ.