Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಟ್ರಕ್ಕಿಂಗ್ ಗೆ ತೆರಳಿದ್ದ 27 ವರ್ಷದ ಯುವಕ ದಾರಿ ಮಧ್ಯೆ ಹೃದಯಾಘಾತದಿಂದ ಸಾವು

ಚಿಕ್ಕಮಗಳೂರು: ಟ್ರಕ್ಕಿಂಗ್ ಗೆ ಹೋಗಿದ್ದ 27 ವರ್ಷದ ಯುವಕನೋರ್ವ ದಾರಿ ಮಧ್ಯೆ ಹೃದಯಾಘಾತದಿಂದ ಸಾವನ್ನಪ್ಪಿದ ಆಘಾತಕಾರಿ ಘಟನೆಯೊಂದು ಬೆಳ್ತಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕುದುರೆಮುಖ ಅರಣ್ಯ ಪ್ರದೇಶದಲ್ಲಿ ಈ ಘಟನೆ ನಡೆದಿದ್ದು, 27 ವರ್ಷ ವಯಸ್ಸಿನ ರಕ್ಷಿತ್ ಎಂಬ ಯುವಕ ಸಾವನ್ನಪ್ಪಿದ ಯುವಕನಾಗಿದ್ದಾನೆ.

ಮೈಸೂರು ಮೂಲದ ಏಳು ಯುವಕರ ತಂಡ ಟ್ರಕ್ಕಿಂಗ್ ಆಗಮಿಸಿದ್ದರು. ಗೆಳೆಯರ ಜೊತೆಗೆ ಟ್ರಕ್ಕಿಂಗ್ ನಲ್ಲಿ ಲವಲವಿಕೆಯಿಂದ ತೆರಳಿದ್ದ ರಕ್ಷಿತ್ ಕುದುರೆಮುಖದಿಂದ–ನೇತ್ರಾವತಿ ಪೀಕ್ ಸ್ಪಾಟ್ ಗೆ ತೆರಳಿದ್ದ. ಆದ್ರೆ ಚಿಕ್ಕಮಗಳೂರು—ದಕ್ಷಿಣ ಕನ್ನಡ ಜಿಲ್ಲೆಯ ನೇತ್ರಾವತಿ ಪೀಕ್ ಸ್ಪಾಟ್ ಗೆ ಹೋಗುವ ಮಾರ್ಗದಲ್ಲಿ ಅವರಿಗೆ ಹೃದಯಾಘಾತವಾಗಿದೆ.