ಡಿಸೆಂಬರ್.8ರಿಂದ ಧರ್ಮಸ್ಥಳದಲ್ಲಿ ಲಕ್ಷ ದೀಪೋತ್ಸವ ಕಾರ್ಯಕ್ರಮ.!
ದಕ್ಷಿಣ ಕನ್ನಡ: ಜಿಲ್ಲೆಯ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾಗದಂತ ಧರ್ಮಸ್ಥಳದಲ್ಲಿ ಡಿಸೆಂಬರ್.8ರಿಂದ ಲಕ್ಷ ದೀಪೋತ್ಸವ ಕಾರ್ಯಕ್ರಮ ನಡೆಯಲಿದೆ.
ಈ ಕುರಿತಂತೆ ದೇವಸ್ಥಾನದಿಂದ ಮಾಹಿತಿ ನೀಡಲಾಗಿದ್ದು, ಧರ್ಮಸ್ಥಳದಲ್ಲಿ ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷ ದೀಪೋತ್ಸವ ಕಾರ್ಯಕ್ರಮ ಈ ವರ್ಷ ಡಿಸೆಂಬರ್.8ರಿಂದ 12ರವರೆಗೆ ನಡೆಯಲಿದೆ. ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ ಎಂದಿದೆ.
ಡಿ.8ರಂದು ಬೆಳಗ್ಗೆ 10.30ಕ್ಕೆ ಹೈಸ್ಕೂಲ್ ವಠಾರದಲ್ಲಿ ರಾಜ್ಯಮಟ್ಟದ ವಸ್ತು ಪ್ರದರ್ಶನ, 11 ರಂದು ಸಂಜೆ 5 ಗಂಟೆಗೆ ಸರ್ವ ಧರ್ಮ ಸಮ್ಮೇಳನದ 91ನೇ ಅಧಿವೇಶನ ನಡೆಯಲಿದೆ. ಡಿ.12ರಂದು ಸಂಜೆ.5 ಗಂಟೆಗೆ ಸಾಹಿತ್ಯ ಸಮ್ಮೇಳನ ನಡೆಯಲಿದೆ ಮತ್ತು ಅಂದು ರಾತ್ರಿ 12 ಗಂಟೆ ಬಳಿಕ ಲಕ್ಷ ದೀಪೋತ್ಸವ ನಡೆಯಲಿದೆ.
ರಾಜ್ಯದ ನಾನಾ ಭಾಗಗಳಿಂದ ಧರ್ಮಸ್ಥಳಕ್ಕೆ ಕೆ ಎಸ್ ಆರ್ ಟಿಸಿ ವಿಶೇಷ ಬಸ್ ಸೌಲಭ್ಯ ಕಲ್ಪಿಸಿದೆ. ಡಿಸೆಂಬರ್.8ರಂದು ಹೊಸಕಟ್ಟೆ ಉತ್ಸವ, 9ಕ್ಕೆ ಕೆರೆಕಟ್ಟೆ ಉತ್ಸವ, 10ರಂದು ಲಲಿತೋದ್ಯಾನ ಉತ್ಸವ, 11ಕ್ಕೆ ಕಂಚಿಮಾರುಕಟ್ಟೆ ಉತ್ಸವ, 12ರಂದು ಗೌರಿಮಾರುಕಟ್ಟೆ ಉತ್ಸವ ನಡೆಯಲಿದೆ.
(ಸಾಂದರ್ಭಿಕ ಚಿತ್ರ)