Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಡೀಸೆಲ್ ಖಾಲಿಯಾಗಿ ನಿಂತಿದ್ದ ಬಸ್‍ಗೆ ಟ್ರಕ್ ಢಿಕ್ಕಿ – 11 ಮಂದಿ ಮೃತ್ಯು

ಜೈಪುರ: ರಾಜಸ್ಥಾನದ ಭರತ್‍ಪುರದ ರಾಷ್ಟ್ರೀಯ ಹೆದ್ದಾರಿಯಲ್ಲಿ ಡೀಸೆಲ್ ಖಾಲಿಯಾಗಿ ನಿಂತಿದ್ದ ಬಸ್‍ಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ 11 ಜನ ಸಾವನ್ನಪ್ಪಿದ ಘಟನೆ ನಡೆದಿದೆ.

ಬಸ್ ರಾಜಸ್ಥಾನದ ಪುಷ್ಕರ್‌ನಿಂದ ಉತ್ತರ ಪ್ರದೇಶದ ವೃಂದಾವನಕ್ಕೆ ತೆರಳುತ್ತಿದ್ದು, ಈ ವೇಳೆ ಡೀಸೆಲ್ ಖಾಲಿಯಾಗಿ ಲಖನ್‍ಪುರದ ಅಂಟ್ರಾ ಫ್ಲೈಓವರ್‌ನ ಮಧ್ಯದಲ್ಲಿ ನಿಂತಿದೆ. ಈ ವೇಳೆ ವೇಗವಾಗಿ ಬಂದ ಟ್ರಕ್ ಬಸ್‍ಗೆ ಡಿಕ್ಕಿಯಾಗಿದೆ.

ಇನ್ನು ಢಿಕ್ಕಿಯ ರಭಸಕ್ಕೆ 11 ಮಂದಿ ಸಾವನ್ನಪ್ಪಿದ್ದು, 12 ಮಂದಿ ತೀವ್ರವಾಗಿ ಗಾಯಗೊಂಡಿದ್ದು, ಮೃತರಲ್ಲಿ ಐವರು ಪುರುಷರು ಹಾಗೂ ಆರು ಜನ ಮಹಿಳೆಯರು ಎಂದು ತಿಳಿದು ಬಂದಿದೆ.

ಗಾಯಗೊಂಡವರನ್ನು ಸ್ಥಳಿಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ವಾಹನಗಳನ್ನು ತೆರವುಗೊಳಿಸಿ ಸಂಚಾರಕ್ಕೆ ವ್ಯವಸ್ಥೆ ಮಾಡಿಕೊಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.