Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತಮಿಳುನಾಡಿಗೆ ಕಾವೇರಿ ನದಿ ಹರಿಸುವ ಆದೇಶ: ಸುಪ್ರಿಂ ಕದ ತಟ್ಟಿದ ರಾಜ್ಯದ ರೈತರು

ಬೆಂಗಳೂರು: ಕಾವೇರಿ ನದಿ ನೀರು ತಮಿಳುನಾಡಿಗೆ ಹರಿಸುವ ಆದೇಶವನ್ನು ನೀಡಲಾಗಿದ್ದು, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಸೂಚನೆಗೆ ರಾಜ್ಯದ ರೈತರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಾಗೂ ರೈತ ಸಂಘಟನೆಗಳು ಸುಪ್ರೀಂಕೋರ್ಟ್ ಕದ ತಟ್ಟಿದ್ದಾರೆ.

ಈ ಸಂಬಂಧ ಸರ್ವೋದಯ ಕರ್ನಾಟಕ ಪಕ್ಷದ ಶಾಸಕ ದರ್ಶನ್ ಪುಟ್ಟಣ್ಣಯ್ಯ ಅವರು ದೆಹಲಿಗೆ ತೆರಳಿದ್ದು, ಹಿರಿಯ ವಕೀಲ ರವಿವರ್ಮ ಕುಮಾರ್ ಅವರ ಮೂಲಕ ಸುಪ್ರೀಂ ಕೋರ್ಟ್ ಗೆ ಸಲ್ಲಿಸಿವೆ.

ನಾವು ಬೆಳೆಗೆ ನೀರು ಕೇಳುತ್ತಿಲ್ಲ. ಬದಲಿಗೆ ಕುಡಿಯುವ ನೀರಿಗೆ ಆದ್ಯತೆ ಕೊಡಿ. ತಮಿಳುನಾಡು ಸರ್ಕಾರ ಕುರುವೈ ಬೆಳೆಗೆ ನೀರು ಕೇಳುತ್ತಿದೆ. ಮಂಡ್ಯ, ಮೈಸೂರು ಸುತ್ತಮುತ್ತ ಮೂರು ದಿನಕ್ಕೊಮ್ಮೆ ನೀರು ಬಿಡಲಾಗುತ್ತಿದೆ. ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ(CWMA) ತಂಡ ತಮಿಳುನಾಡಿಗೆ ಭೇಟಿ ನೀಡಿ ಪರಿಶೀಲನೆ ಮಾಡಿದೆ. ಆದರೆ, ಕರ್ನಾಟಕಕ್ಕೆ ಭೇಟಿ ನೀಡಿಲ್ಲ ಎಂದು ರೈತ ಸಂಘಟನೆಗಳು ಅರ್ಜಿಯಲ್ಲಿ ಉಲ್ಲೇಖಿಸಿವೆ.

ಕರ್ನಾಟಕದಲ್ಲಿ ಕಾವೇರಿ ಕಣಿವೆಯ ನೀರಿನ ಬಿಕ್ಕಟ್ಟಿನ ಪರಿಸ್ಥಿತಿಯನ್ನು ನ್ಯಾಯಾಲಯದ ಗಮನಕ್ಕೆ ತರಲಾಗುವುದು ಎಂದು ಮೂಲಗಳು ತಿಳಿಸಿವೆ.