Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತಮಿಳುನಾಡಿಗೆ ಪ್ರತಿದಿನ 5000 ಕ್ಯೂಸೆಕ್ಸ್ ನೀರು ಬಿಡಿ – ಕರ್ನಾಟಕಕ್ಕೆ ಸುಪ್ರೀಂ ಕೋರ್ಟ್ ಆದೇಶ

ಇಂದು ಸುಪ್ರಿಂಕೋರ್ಟ್‌ನಲ್ಲಿ ಕಾವೇರಿ ವಿವಾದದ ಕುರಿತು ಅರ್ಜಿ ವಿಚಾರಣೆ ನಡೆಯುತ್ತಿದ್ದು, ಕರ್ನಾಟಕ, ತಮಿಳುನಾಡು ಸಲ್ಲಿಸಿರುವ ಅರ್ಜಿ ವಿಚಾರಣೆ ಬೆಳಗ್ಗೆ 10:30ಕ್ಕೆ ನ್ಯಾಯಮೂರ್ತಿ ಬಿ.ಆರ್ ಗವಾಯಿ ನೇತೃತ್ವದ ತ್ರಿ ಸದಸ್ಯ ಪೀಠದಲ್ಲಿ ನಡೆಯುತ್ತಿದೆ. ಈ ಮೂಲಕ ಕಾವೇರಿ ನದಿ ನೀರು ಪ್ರಾಧಿಕಾರ ನೀಡಿದ್ದ ಆದೇಶವನ್ನು ಸುಪ್ರಿಂಕೋರ್ಟ್‌ನ ಮೂರು ಸದಸ್ಯರ ನ್ಯಾಯಪೀಠ ಪುನರುಚ್ಚರಿಸಿದ್ದು, ತಮಿಳುನಾಡಿಗೆ ಮುಂದಿನ ಹದಿನೈದು ದಿನಗಳ ಕಾಲ ಪ್ರತಿ ದಿನ 5000 ಕ್ಯೂಸೆಕ್ಸ್‌ ನೀರು ನೀರು ಹರಿಸಲು ಸುಪ್ರಿಂಕೋರ್ಟ್‌ ಆದೇಶಿಸಿದೆ.

ತೀರ್ಪು ಬರುವವರೆಗೂ 10 ಸಾವಿರ ಕ್ಯೂಸೆಕ್ಸ್ ನೀರು ಬಿಡಬೇಕು ಎಂದು ತಮಿಳುನಾಡು ವಾದ ಮಂಡಿಸುತ್ತಿದೆ. “ಆದರೆ ನಮ್ಮಲ್ಲಿ ರೈತರಿಗೆ ನೀರು ಇಲ್ಲ. ಈ ಬಾರಿ ಮಳೆ ಕೈಕೊಟ್ಟಿದೆ. ಇಲ್ಲಿನ ಜಲಾಶಯಗಳಲ್ಲಿ ನೀರಿನ ಕೊರತೆ ಉಂಟಾಗಿದೆ. ಅಷ್ಟು ನೀರು ಬಿಡುವುದಕ್ಕೆ ಆಗುವುದಿಲ್ಲ, ಸಾಮಾನ ವರ್ಷದಂತೆ ನೀರು ಬಿಡಲು ತಮಿಳುನಾಡು ಕೇಳುತ್ತಿದೆ” ಎಂದು ಕರ್ನಾಟಕದ ವಾದವಾಗಿದೆ. ಕರ್ನಾಟಕ ಪರ ವಕೀಲ ಶ್ಯಾಮ್ ವಾದ ಮಂಡಿಸಿದರು.

ಇದೇ ವೇಳೆ ಕಾವೇರಿ ನದಿ ನೀರು ಮಧ್ಯಪ್ರವೇಶಕ್ಕೆ ಸುಪ್ರಿಂಕೋರ್ಟ್‌ ನಕಾರ ವ್ಯಕ್ತಪಡಿಸಿದ್ದು, ನಾವು ಪ್ರಕರಣ ಸಂಬಂಧ ಮಧ್ಯಪ್ರವೇಶ ಮಾಡುವುದಕ್ಕೆ ಸಾಧ್ಯವಿಲ್ಲ, ನಾವು ಕೇವಲ ಹದಿನೈದು ದಿನಕ್ಕೆ ಒಂದು ಸಾರಿ ಪರಿಸ್ಥಿತಿಯನ್ನು ಅವಲೋಕಮಾಡುತ್ತೇವೆ ಎಂದು ಹೇಳಿದೆ.

ನ್ಯಾಯಪೀಠದ ಮುಂದೆ ತಮಿಳುನಾಡು ಪರ ವಕೀಲರಾದ ರೋಹಟಗಿ ಅವರು ವಾದ ಮಂಡನೆ ಮಾಡಿ, ನಮಗೆ ಕಡಿಮೆ ಪ್ರಮಾಣದಲ್ಲಿ ನೀರು ಬಿಡಲಾಗುತ್ತಿದೆ ಎಂದು ಹೇಳಿದರು. ಇಂದು ಬೆಳಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿ ನೀರು ಹಂಚಿಕೆ ಸಂಬಂಧ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ದೆಹಲಿಯಲ್ಲಿ ಇಂದು ರಾಜ್ಯ ಪ್ರತಿನಿಧಿಸುವ ಕೇಂದ್ರದ ಸಚಿವರು ಹಾಗೂ ಸಂಸದರೊಂದಿಗೆ ಭೇಟಿ ಮಾಡಿ ಚರ್ಚಿಸಿದ್ದಾರೆ.