Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ತೆಲಂಗಾಣದಲ್ಲಿ ಕಾಂಗ್ರೆಸ್‌ಗೆ ತೂಫಾನ್‌ ನಂಥ ಬೆಂಬಲ ಸಿಗಲಿದೆ- ರಾಹುಲ್‌

ಹೈದರಾಬಾದ್: ತೆಲಂಗಾಣ ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತೂಫಾನ್) (ಚಂಡಮಾರುತ)ದಂಥ ಬೆಂಬಲ ವ್ಯಕ್ತವಾಗಲಿದೆ  ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

 

ತೆಲಂಗಾಣದ ಐದು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ರೋಡ್‌ ಶೋ, ರ್‍ಯಾಲಿಯಲ್ಲಿ ಮಾತನಾಡಿದ ಅವರು , ಬಿಆರ್‌ಎಸ್ ಹೀನಾಯ ಸೋಲನ್ನು ಅನುಭವಿಸಲಿದೆ.ತೆಲಂಗಾಣದಲ್ಲಿ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್)ಯ ಭ್ರಷ್ಟಾಚಾರವೇ ತುಂಬಿಹೋಗಿದೆ. ಎಂದು ಆರೋಪಿಸಿದರು. ಈ ಬಾರಿ ಕೆ.ಚಂದ್ರಶೇಖರ ರಾವ್ ಅವರ ಪಕ್ಷ ಮರೆಯಾ ಗಲಿದೆ ಎಂದರು.ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಪಂಚಾಯತ್ ರಾಜ್‌ ನಲ್ಲಿ ಒಬಿಸಿ ಮೀಸಲಾತಿಯನ್ನು ಶೇ.23ರಿಂದ ಶೇ.42ರಷ್ಟು ಹೆಚ್ಚಿಸಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.