ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ಮತ್ತೆ ಕನ್ನಡದಲ್ಲಿ ನಟಿಸುತ್ತಾರ.? ಯಾರ ಜೊತೆ.?
ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ಜೊತೆ ತೆಲುಗುವಿನ ಮೆಗಾ ಸ್ಟಾರ್ ಚಿರಂಜೀವಿ ನಟಿಸಲಿದ್ದಾರೆನ್ನುವ ಮಾತುಗಳು ಸಿನಿಮಾ ವಲಯದಲ್ಲಿ ಕೇಳಿಬರುತ್ತಿವೆ.
ಹೌದು, ಜೋಗಿ ಪ್ರೇಮ್ ಹಾಗೂ ದರ್ಶನ್ ಕಾಂಬಿನೇಷನ್ ನಲ್ಲಿ ಮೂಡಿ ಬರಲಿರುವ D58 ಚಿತ್ರದಲ್ಲಿ ಟಾಲಿವುಡ್ ಸ್ಟಾರ್ ನನ್ನು ಮತ್ತೆ ಕನ್ನಡ ಚಿತ್ರರಂಗಕ್ಕೆ ಕರೆತರಲು ಸಿದ್ಧತೆ ನಡೆಸಿದ್ದಾರೆ.
ಈ ಹಿಂದೆ ನಟ ರವಿಚಂದ್ರನ್ ಅವರ ಜೊತೆಗೆ ಸಿಪಾಯಿ ಚಿತ್ರದಲ್ಲಿ ನಟಿಸಿದ್ದರು. ಇದೀಗ ಕೆವಿಎನ್ ಪ್ರೊಡಕ್ಷನ್ ನಿರ್ಮಿಸುತ್ತಿರುವ ಈ ಚಿತ್ರದಲ್ಲಿ ಚಿರು ಅಭಿನಯಿಸಲಿದ್ದಾರೆ ಎಂಬುದು ಸುದ್ದಿ.!