ತೆಲುಗು ಸಿನಿಮಾ ರಂಗಕ್ಕೆ ಎಂಟ್ರಿಕೊಟ್ಟ ಸಪ್ತಮಿ ಗೌಡ
ಕಾತಂತರದ ಮೂಲಕ ಸ್ಯಾಂಡಲ್ ಚಿತ್ರ ರಂಗಕ್ಕೆ ಎಂಟ್ರಿಕೊಟ್ಟ ಸಪ್ತಮಿ ಗೌಡ ಇದೀಗ ತೆಲುಗು ಸಿನಿಮಾ ರಂಗಕ್ಕೆ ಪಾದಾರ್ಪಣೆ ಮಾಡಲಿದ್ದಾರೆ ಎಂಬ ಸುದ್ದಿ ಹರಿದಾಡಿತ್ತು. ಇದು ಈಗ ನಿಜವಾಗಿದ್ದು, ತಮ್ಮುಡು ಸಿನಿಮಾದ ಮೂಲಕ ಅವರು ತೆಲುಗು ಸಿನಿಮಾ ರಂಗವನ್ನು ಪ್ರವೇಶ ಮಾಡುತ್ತಿದ್ದಾರೆ. ಈಗಾಗಲೇ ಚಿತ್ರದ ಶೂಟಿಂಗ್ ಕೂಡ ಶುರುವಾಗಿದೆ.
ಪಾಪ್ ಕಾರ್ನ್ ಮಂಕಿ ಟೈಗರ್ ಸಿನಿಮಾ ಮೂಲಕ ನಟಿ ಸಪ್ತಮಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟು ನಟ ಡಾಲಿ ಧನಂಜಯ್ ಜೊತೆ ತೆರೆ ಹಂಚಿಕೊಂಡಿದ್ದರು. ಆದರೆ 2ನೇ ಸಿನಿಮಾ ಕಾಂತಾರ ದಲ್ಲಿ ನಟ ರಿಷಬ್ ಶೆಟ್ಟಿಗೆ ಜೋಡಿಯಾಗಿ ನಟಿಸಿದ ಬಳಿಕ ಸಪ್ತಮಿ ಗೌಡ ಪ್ಯಾನ್ ಇಂಡಿಯಾ ಸ್ಟಾರ್ ಆಗಿದ್ದಾರೆ.
ಈ ಹಿಂದೆ, ಸಪ್ತಮಿ ಗೌಡ ದಿ ವ್ಯಾಕ್ಸಿನ್ ವಾರ್ ಮೂಲಕ ಬಾಲಿವುಡ್ಗೆ ಪಾದಾರ್ಪಣೆ ಮಾಡಿದ್ದರು. ಈಗ ತಮ್ಮುಡು ಚಿತ್ರದ ಮೂಲಕ ತೆಲುಗು ಚಿತ್ರರಂಗಕ್ಕೆ ಎಂಟ್ರಿ ಕೊಟ್ಟು, ಕನ್ನಡ, ಹಿಂದಿ ಮತ್ತು ತೆಲುಗಿನ ಚಿತ್ರಗಳನ್ನು ನಟಿಸಲು ಮುಂದಾಗುವ ಮೂಲಕ ಬಹುಭಾಷಾ ತಾರೆಯಾಗಿದ್ದಾರೆ.