ತ್ರಿಶೂರ್‌ನಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಕೇರಳ: ಕೇರಳದ ತ್ರಿಶೂರ್‌ನಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ರೋಡ್ ಶೋ ನಡೆಸಿದ್ದು, ಬೃಹತ್ ಸಮಾವೇಶವನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಮಾತನಾಡಿದ್ದಾರೆ.
ಇಂದು ಮಧ್ಯಾಹ್ನ ಕೇರಳಕ್ಕೆ ಪ್ರಧಾನಿ ಮೋದಿ ಬಂದಿಳಿದಿದ್ದು, ರೋಡ್‌ಶೋ ನಡೆಸಿ ನಂತರ ತೆಕ್ಕಿಂಕಾಡ್ ಮೈದಾನದಲ್ಲಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದ್ದಾರೆ.
ಇನ್ನು ಪ್ರಧಾನಿ ಮೋದಿ ಅವರನ್ನು ನೋಡಲು ಮಹಿಳೆಯರು ಕಾದು ಕುಳಿತಿರುವುದು ಕಂಡುಬಂತು.
ಸಂಸತ್ತಿನ ಉಭಯ ಸದನಗಳಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಯಶಸ್ವಿಯಾಗಿ ಅಂಗೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿಯವರನ್ನು ಶ್ಲಾಘಿಸಲು ‘ಸ್ತ್ರೀ ಶಕ್ತಿ ಮೋದಿಕ್ಕ್ ಒಪ್ಪಂ’ (ಮೋದಿಯೊಂದಿಗೆ ಸ್ತ್ರೀ ಶಕ್ತಿ ) ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು, ಇದರಲ್ಲಿ ಅನೇಕ ಮಹಿಳೆಯರು ಭಾಗಿಯಾಗಿದ್ದರು.