Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೀಪಾವಳಿ ಹಬ್ಬದ ಉಡುಗೊರೆ ಕಾಫಿ ಬೆಳೆಗಾರರಿಗೆ ಸಿಹಿಸುದ್ದಿ.!

 

ಹಾಸನ: ಕಾಫಿ ಬೆಳೆಗಾರರು ವಿದ್ಯುತ್ ಬಿಲ್ ಅಸಲು ಕಟ್ಟಿದರೆ ಬಡ್ಡಿ ಮನ್ನಾ ಮಾಡುವುದಾಗಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಆ ಮೂಲಕ ಕಾಫಿ ಬೆಳೆಗಾರರಿಗೆ ದೀಪಾವಳಿ ಹಬ್ಬದ ಉಡುಗೊರೆ ನೀಡಿದ್ದಾರೆ. ಹಾಸನ ಜಿಲ್ಲಾ ಪಂಚಾಯಿತ್​ ಸಭಾಂಗಣದಲ್ಲಿ ನಡೆದ ಪ್ರಗತಿಪರಿಶೀಲನಾ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಅಸಲು ಅಥವಾ ಬಡ್ಡಿ ಮನ್ನಾಗೆ ಸಭೆಯಲ್ಲಿ ಸಕಲೇಶಪುರ ಕ್ಷೇತ್ರದ ಶಾಸಕ ಸಿಮೆಂಟ್ ಮಂಜು ಮನವಿ ಮಾಡಿದ್ದರು. ಆ ಹಿನ್ನೆಲೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡ ಕಾಫಿ ಬೆಳೆಗಾರರಿಗೆ ಸಿಹಿಸುದ್ದಿ ನೀಡಲಾಗಿದೆ.

ದ್ಯುತ್ ಬಿಲ್ ಕಟ್ಟದಿದ್ದಕ್ಕೆ ವಿದ್ಯುತ್ ಸಂಪರ್ಕ ಕಡಿತ ಮಾಡಿದ್ದಾರೆ. ಈ ವೇಳೆ ತೋಟದ ಮನೆಗಳಿಗೆ ವಿದ್ಯುತ್ ಸಂಪರ್ಕ ಕಡಿತ ಮಾಡದಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸಭೆಯಲ್ಲಿ ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.