ದುರ್ಗಾ ಪೂಜಾ ಪೆಂಡಾಲ್‌ನಲ್ಲಿ ಕಾಲ್ತುಳಿತ: ಬಾಲಕ, ಇಬ್ಬರು ಮಹಿಳೆಯರು ಸಾವು
ಪಾಟ್ನಾ: ಬಿಹಾರದ ಗೋಪಾಲ್‌ಗಂಜ್‌ನಲ್ಲಿ ಸೋಮವಾರ ತಡರಾತ್ರಿ ನಡೆದ ಪಂದಳದ ದುರ್ಗಾಪೂಜೆ ಮಹೋತ್ಸವದಲ್ಲಿ ಕಾಲ್ತುಳಿತ ಸಂಭವಿಸಿ ಐದು ವರ್ಷದ ಬಾಲಕ ಹಾಗೂ ಇಬ್ಬರು ಮಹಿಳೆಯರು ಸಾವನ್ನಪ್ಪಿದ್ದು, ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಗೋಪಾಲ್‌ಗಂಜ್‌ನ ನಗರದ ರಾಜದಳದ ಜನನಿಬಿಡ ಪ್ರದೇಶದಲ್ಲಿ ಘಟನೆ ನಡೆದಿದೆ. ‘ಪ್ರಸಾದ’ ಸ್ವೀಕರಿಸುವ ವೇಳೆ ಕಾಲ್ತುಳಿತ ಉಂಟಾಗಿದೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸ್ವರ್ಣ ಪ್ರಭಾತ್ ತಿಳಿಸಿದ್ದಾರೆ. ಜನಸಂದಣಿಯನ್ನು ನಿರ್ವಹಿಸಲು ಪಂದಳದಲ್ಲಿ ಯಾವುದೇ ಭದ್ರತಾ ನಿಯೋಜನೆ ಇರಲಿಲ್ಲ, ಇದು ಕಾಲ್ತುಳಿತಕ್ಕೆ ಕಾರಣವಾಯಿತು ಎಂದು ತಿಳಿದು ಬಂದಿದೆ.