Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೆಹಲಿ ಮದ್ಯ ನೀತಿ ಪ್ರಕರಣ: ಎಎಪಿ ಸಂಸದ ಸಂಜಯ್ ಸಿಂಗ್ ಜಾಮೀನು ಅರ್ಜಿ ವಜಾ

ನವದೆಹಲಿ: ದೆಹಲಿ ಅಬಕಾರಿ ನೀತಿ ಪಿಎಂಎಲ್‌ಎ ಪ್ರಕರಣದಲ್ಲಿ ಎಎಪಿ ಸಂಸದ ಸಂಜಯ್ ಸಿಂಗ್ ಅವರ ಜಾಮೀನು ಅರ್ಜಿಯನ್ನು ದೆಹಲಿ ನ್ಯಾಯಾಲಯ ಶುಕ್ರವಾರ ವಜಾಗೊಳಿಸಿದೆ. ಜೊತೆಗೆ ನ್ಯಾಯಾಲಯವು ಸಂಜಯ್ ಸಿಂಗ್ ನ್ಯಾಯಾಂಗ ಬಂಧನವನ್ನ ಡಿಸೆಂಬರ್ 21 ರವರೆಗೆ ವಿಸ್ತರಿಸಿದೆ.

ರೋಸ್ ಅವೆನ್ಯೂ ನ್ಯಾಯಾಲಯ ನ್ಯಾಯಾಧೀಶ ಎಂಕೆ ನಾಗ್ಪಾಲ್ ಅವರ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು.

ಹಗರಣಕ್ಕೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ಸಿಂಗ್ ಅವರಿಗೆ ಅದರ ಐದನೇ ಪೂರಕ ಚಾರ್ಜ್ ಶೀಟ್ ಮತ್ತು ಇತರ ಸಂಬಂಧಿತ ದಾಖಲೆಗಳ ಪ್ರತಿಯನ್ನು ನೀಡುವಂತೆ ನ್ಯಾಯಾಧೀಶರು ಜಾರಿ ನಿರ್ದೇಶನಾಲಯವನ್ನು ಕೇಳಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಅಂದಹಾಗೆ, ಅಬಕಾರಿ ನೀತಿ ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸಂಜಯ್ ಸಿಂಗ್ ತನಿಖೆ ಎದುರಿಸುತ್ತಿದ್ದಾರೆ. ಅಕ್ಟೋಬರ್ 4 ರಂದು ಸಿಂಗ್ ಅವರನ್ನು ಬಂಧಿಸಲಾಗಿತ್ತು.