ದೇವರ ಬಗ್ಗೆ ನಂಬಿಕೆ ಇಲ್ಲ: ಸ್ವಾಮೀಜಿ.!
ಚಿತ್ರದುರ್ಗ: ‘ಗುಡಿ ಗೋಪುರಗಳಿಗೆ ಹೋಗುವುದು ಶಿಲ್ಪದ ಸೌಂದರ್ಯ ನೋಡುವುದಕ್ಕೆ. ದೇವರಿದ್ದಾನೆ ಎಂಬ ನಂಬಿಕೆಯಿಂದಲ್ಲ’ ಎಂದು ಸಾಣೇಹಳ್ಳಿ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹೇಳಿರುವುದು ಭಾರೀ ವಿವಾದಕ್ಕೆ ಕಾರಣವಾಗಿದೆ.
ಇದೇ ವೇಳೆ ‘ಲಿಂಗಾಯತ ಒಂದು ಜಾತಿ ಅಲ್ಲ, ಅದೊಂದು ತತ್ವ, ಸಿದ್ದಾಂತ. ಯಾರು ಆ ತತ್ವಕ್ಕೆ ಅನುಗುಣವಾಗಿ ಅಂಗದ ಮೇಲೆ ಲಿಂಗ ಧರಿಸಿ ಪೂಜೆ ಮಾಡುತ್ತಾರೋ ಅವರು ಮಾತ್ರ ಲಿಂಗಾಯತರು. ಹುಟ್ಟಿನಿಂದ ಲಿಂಗಾಯತತನ ಬರುವುದಿಲ್ಲ’ ಎಂದು ಹೇಳಿರುವುದು ಭಾರೀ ಆಕ್ರೋಶಕ್ಕೆ ಕಾರಣವಾಗಿದೆಯಂತೆ.!