Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೇಶದ ಉನ್ನತಿಗೆ ಕೈಗಾರಿಕೆಗಳ ಅಭಿವೃದ್ಧಿ ಅಗತ್ಯ – ಕೇಂದ್ರ ಸಚಿವ ಗಡ್ಕರಿ

ನವದೆಹಲಿ: ಭಾರತದ ಏಳ್ಗೆಗೆ ಕೈಗಾರಿಕೆ ಹಾಗೂ ವ್ಯಾಪಾರ ಕ್ಷೇತ್ರದ ಅಭಿವೃದ್ಧಿ ಆಗಬೇಕಿದೆ. ಇದರಿಂದ ಭಾರತದ ಆರ್ಥಿಕತೆಗೆ ಉತ್ತೇಜನ ದೊರೆತಂತಾಗುತ್ತದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ನವದೆಹಲಿಯಲ್ಲಿ ಆರ್‌ಐಸಿಎಸ್ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಗಡ್ಕರಿ, “ಭಾರತವನ್ನು ಐದು ಟ್ರಿಲಿಯನ್ ಡಾಲರ್ ಆರ್ಥಿಕತೆಯನ್ನಾಗಿ ಮಾಡುವುದು ಪ್ರಧಾನಿ ಮೋದಿಯವರ ಕನಸು. ಅದೇ ಸಮಯದಲ್ಲಿ, ನಾವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಆರ್ಥಿಕತೆ. ಪ್ರಸ್ತುತ ಈ ವಲಯದ ವಹಿವಾಟು 7.5 ಲಕ್ಷ ಕೋಟಿ ರೂ.ಗಳಷ್ಟಿದೆ” ಎಂದು ಹೇಳಿದರು. “ಇದು ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ಗರಿಷ್ಠ ಸರಕು ಮತ್ತು ಸೇವಾ ತೆರಿಗೆಯನ್ನು ನೀಡುತ್ತಿರುವ ಉದ್ಯಮವಾಗಿದೆ. ಇದು 4 ಕೋಟಿ 50 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಉದ್ಯಮವಾಗಿದೆ” ಎಂದು ಗಡ್ಕರಿ ಹೇಳಿದರು.