Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ದೇಶದ ರೈತರು ಪಿಎಂ ಕಿಸಾನ್ ಸಮೃದ್ಧಿ ಅಡಿಯಲ್ಲಿ ಇಂದು 18,000 ಕೋಟಿ ಸ್ವೀಕರಿಸಿದ್ದಾರೆ’ – ಮೋದಿ

ಸಿಕಾರ್: ಇಂದು ದೇಶದ ರೈತರು ಪಿಎಂ ಕಿಸಾನ್ ಸಮೃದ್ಧಿ ಅಡಿಯಲ್ಲಿ 18,000 ಕೋಟಿಗಳನ್ನು ಸ್ವೀಕರಿಸಿದ್ದಾರೆ. ದೇಶದಲ್ಲಿ 1,25,000 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು ಕೇಂದ್ರಗಳು ಪ್ರಾರಂಭವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕೇಂದ್ರ ಸರ್ಕಾರ ಒಂಬತ್ತು ವರ್ಷಗಳಿಂದ ರೈತರ ಹಿತದೃಷ್ಟಿಯಿಂದ ನಿರ್ಧಾರಗಳನ್ನು ತೆಗೆದುಕೊಂಡಿದ್ದು, ಅವರಿಗೆ ಬೀಜದಿಂದ ಮಾರುಕಟ್ಟೆವರೆಗೆ ವ್ಯವಸ್ಥೆ ಮಾಡಿದೆ ಎಂದರು.

ದೇಶದಲ್ಲಿ 1,25,000 ಪಿಎಂ ಕಿಸಾನ್ ಸಮೃದ್ಧಿ ಕೇಂದ್ರಗಳು ಕೇಂದ್ರಗಳು ಪ್ರಾರಂಭವಾಗಿದ್ದು, ಬ್ಲಾಕ್ ಮತ್ತು ಗ್ರಾಮ ಮಟ್ಟದಲ್ಲಿ PMKSY ಕೇಂದ್ರಗಳು ರೈತರಿಗೆ ಪ್ರಯೋಜನವನ್ನು ನೀಡುತ್ತವೆ. ಡಿಜಿಟಲ್ ವಾಣಿಜ್ಯಕ್ಕಾಗಿ ಮುಕ್ತ ನೆಟ್‌ವರ್ಕ್ ಕೂಡ ರೈತರಿಗೆ ಪ್ರಾರಂಭವಾಗಿದೆ ಎಂದಿದ್ದಾರೆ.

ಇನ್ನು ಸ್ವಾತಂತ್ರ್ಯ ಬಂದು ಹಲವು ದಶಕಗಳ ನಂತರ ಇಂತಹ ಸರ್ಕಾರ ಅಧಿಕಾರಕ್ಕೆ ಬಂದಿದ್ದು, ರೈತನ ನೋವು-ನಲಿವುಗಳನ್ನು ಅರಿತು, ರೈತನ ಕಾಳಜಿಯನ್ನು ಅರ್ಥಮಾಡಿಕೊಂಡಿದೆ ಎಂದು ಹೇಳಿದ್ದಾರೆ.