Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ದೇಶದ ಹೆಸರು ಬದಲಾವಣೆಗಿಂತ ಜನರ ಜೀವನದಲ್ಲಿ ಬದಲಾವಣೆ ಮುಖ್ಯ’- ಡಿಕೆಶಿ

ಬೆಂಗಳೂರು:ದೇಶದ ಹೆಸರು ಬದಲಾವಣೆ ಮಾಡಿದರೆ ಏನು ಲಾಭ. ದೇಶದ ಜನರ ಜೀವನದಲ್ಲಿ ಬದಲಾವಣೆ ಆಗುವುದು ಮುಖ್ಯ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಸದಾಶಿವನಗರದ ನಿವಾಸದಲ್ಲಿ ದೇಶದ ಹೆಸರನ್ನು ಇಂಡಿಯಾ ಬದಲು ಭಾರತ ಎಂದು ಬದಲಿಸುವ ಕುರಿತು ಪ್ರತಿಕ್ರಿಯಿಸಿದ ಅವರು, ದೇಶದ ಎಲ್ಲ ಜನರಿಗೂ ಅನ್ನ, ಉದ್ಯೋಗ, ಮನೆ ಸಿಕ್ಕರೆ ಅದನ್ನು ಬದಲಾವಣೆ ಎನ್ನಬಹುದು ಎಂದರು.

ಕಳೆದ 9 ವರ್ಷಗಳಲ್ಲಿ ಜನರ ಆದಾಯ ದುಪಟ್ಟಾಯಿತೇ, 15 ಲಕ್ಷ ರೂ. ಬ್ಯಾಂಕ್ ಖಾತೆಗೆ ಬಂದಿದೆಯೇ? ಇಲ್ಲ. ಒಂದೇ ಒಂದು ಅಕ್ಕಿಕಾಳು ಕಡಿಮೆ ಕೊಟ್ಟರು ಬಿಡುವುದಿಲ್ಲ ಎಂದು ಬಿಜೆಪಿಯವರು ನಮ್ಮನ್ನು ಪ್ರಶ್ನೆ ಮಾಡುತ್ತಿದ್ದರು, ಆದರೆ ಅವರು ಕೊಟ್ಟ ಮಾತನ್ನು ಒಂದಾದರೂ ಉಳಿಸಿಕೊಂಡಿದ್ದಾರೆಯೇ ಎಂದು ಪ್ರಶ್ನಿಸಿದರೆ.

ಶ್ರೀಮಂತರು, ದೊಡ್ಡ ಉದ್ಯಮಿಗಳು ದೇಶಬಿಟ್ಟು ಹೋಗುತ್ತಿದ್ದಾರೆ. 12 ಲಕ್ಷ ಪಾಸ್ ಪೋರ್ಟ್ ಗಳನ್ನು ಸರ್ಕಾರದ ವಶಕ್ಕೆ ನೀಡಿ ಈ ದೇಶದ ಕೋಟ್ಯಾಧಿಪತಿಗಳು ಬೇರೆ ದೇಶದ ಪೌರ ತೆಗೆದುಕೊಂಡಿದ್ದಾರೆ. ನಮ್ಮ ದೇಶದ ಹಣ ಹೊರಗಡೆ ಹೋಗುತ್ತಿದೆ. ಹೆಸರು ಬದಲಾವಣೆಯಿಂದ ಏನೂ ಲಾಭವಿಲ್ಲ. ನಮ್ಮ ಆಚಾರ- ವಿಚಾರ ಬದಲಾವಣೆಯಾಗಬೇಕು ಎಂದರು.

ಜನರ ಕಲ್ಯಾಣ ಮಾಡುವ ಹೊಸ ಕಾನೂನುಗಳನ್ನು ಸರ್ಕಾರ ತರಬೇಕು. ನಮ್ಮ ಯುಪಿಎ ಸರ್ಕಾರ ಇದ್ದಾಗ ಮಾಹಿತಿಹಕ್ಕು, ಆರ್.ಟಿ.ಐ., ನರೇಗಾ, ಆಹಾರ ಭದ್ರತಾ ಕಾಯ್ದೆಗಳನ್ನು ಜಾರಿಗೆ ತರಲಾಯಿತು. ಇಂತಹ ಯೋಚನೆಗಳು ಬಿಜೆಪಿಯವರಿಗೆ ಬರುವುದಿಲ್ಲವೇ?” ಎಂದು ಡಿಕೆಶಿ ಪ್ರಶ್ನಿಸಿದರು.