ದೇಶವನ್ನುದ್ದೇಶಿಸಿ ರಾಷ್ಟ್ರಪತಿ ದ್ರೌಪದಿ ಮುರ್ಮು ಭಾಷಣ
ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಆ.ರಂದು 76ನೇ ಸ್ವಾತಂತ್ರ್ಯ ದಿನಾಚರಣೆ ಮುನ್ನಾ ದಿನದಂದು ದೇಶವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.ಈ ಭಾಷಣವನ್ನು ಆಕಾಶವಾಣಿಯ ಸಂಪೂರ್ಣ ರಾಷ್ಟ್ರೀಯ ನೆಟ್‌ವರ್ಕ್‌ನಲ್ಲಿ ಸಂಜೆ 7ರಿಂದ ಪ್ರಸಾರ ಮಾಡಲಾಗುತ್ತದೆ ಮತ್ತು ಹಿಂದಿಯಲ್ಲಿ ಎಲ್ಲ ದೂರದರ್ಶನ ಚಾನೆಲ್‌ಗಳಲ್ಲಿ ಪ್ರಸಾರ ಮಾಡಲಾಗುತ್ತದೆ. ಬಳಿಕ ಇಂಗ್ಲೀಷ್ ಆವೃತ್ತಿಯನ್ನು ಪ್ರಸಾರ ಮಾಡಲಾಗುತ್ತದೆ. ಆಕಾಶವಾಣಿಯು ಪ್ರಾದೇಶಿಕ ಭಾಷಾ ಆವೃತ್ತಿಗಳನ್ನು ರಾತ್ರಿ 9.30ಕ್ಕೆ ಅದರ ಪ್ರಾದೇಶಿಕ ನೆಟ್‌ವರ್ಕ್‌ಗಳಲ್ಲಿ ಪ್ರಸಾರ ಮಾಡುತ್ತದೆ.