Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ದೇಶಾದ್ಯಂತ 46 ಸ್ಥಳಗಳಲ್ಲಿ ಉದ್ಯೋಗ ಮೇಳ: 51,000 ಜನರಿಗೆ ನೇಮಕಾತಿ ಪತ್ರ ವಿತರಿಸಿದ ಪ್ರಧಾನಿ

ನವದೆಹಲಿ: ಇಂದು ದೇಶಾದ್ಯಂತ 46 ಸ್ಥಳಗಳಲ್ಲಿ ಉದ್ಯೋಗ ಮೇಳಗಳನ್ನು ಆಯೋಜಿಸಲಾಗಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ಹೊಸದಾಗಿ ನೇಮಕಗೊಂಡ ಸುಮಾರು 51,000 ಜನರಿಗೆ ನೇಮಕಾತಿ ಪತ್ರಗಳನ್ನು ನೀಡಿದ್ದಾರೆ.

ನವದೆಹಲಿಯ ರೈಸಿನಾ ರಸ್ತೆಯಲ್ಲಿರುವ ರಾಷ್ಟ್ರೀಯ ಮಾಧ್ಯಮ ಕೇಂದ್ರದಲ್ಲಿ ವಿಡಿಯೋ ಕಾನ್ಫರೆನ್ಸ್​ ಮೂಲಕ ಪ್ರಧಾನಿ ಮೋದಿ ನೇಮಕಾತಿ ಪತ್ರ ವಿತರಿಸಿದ್ದಾರೆ.

ದೇಶಾದ್ಯಂತ ಹೊಸ ನೇಮಕಾತಿಯಡಿ ಆಯ್ಕೆಯಾದ ಈ ಅಭ್ಯರ್ಥಿಗಳು ಪರಮಾಣು ಶಕ್ತಿ ಇಲಾಖೆ, ಕಂದಾಯ ಇಲಾಖೆ, ಅಂಚೆ ಇಲಾಖೆ, ಭಾರತೀಯ ಲೆಕ್ಕ ಪರಿಶೋಧನೆ ಮತ್ತು ಸಾಂಖಿಕ ಇಲಾಖೆ ಸೇರಿದಂತೆ ವಿವಿಧ ವಿಭಾಗಗಳಲ್ಲಿ ಕಾರ್ಯನಿರ್ವಹಿಸುತ್ತಾರೆ.

ಆ.28ರಂದು ಆಯೋಜಿಸಿದ್ದ ಉದ್ಯೋಗ ಮೇಳದಲ್ಲಿ 51 ಸಾವಿರ ಮಂದಿಗೆ ಸೇರ್ಪಡೆ ಪತ್ರ ನೀಡಲಾಗಿತ್ತು.

ರೋಜ್​ಗಾರ್ ಮೇಳದಲ್ಲಿ ಇಂದು ನೇಮಕಾತಿ ಪತ್ರಗಳನ್ನು ಸ್ವೀಕರಿಸಿದ ಯುವಕರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.