Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಟಿ ಹೇಮಾ ಚೌಧರಿಗೆ ತೀವ್ರ ಅನಾರೋಗ್ಯ: ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ

ಬೆಂಗಳೂರು: ದಕ್ಷಿಣ ಭಾರತ ಚಲನಚಿತ್ರರಂಗದ ಹೆಸರಾಂತ ನಟಿ ಹೇಮಾ ಚೌಧರಿ ಅವರಿಗೆ ಬ್ರೇನ್ ಹ್ಯಾಮರೇಜ್ ಆಗಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕಳೆದೆರಡು ದಿನಗಳ ಹಿಂದೆ ಹೇಮಾ ಚೌಧರಿ ಅವರಿಗೆ ಬ್ರೈನ್ ಹ್ಯಾಮರೇಜ್‌ ಆಗಿದ್ದು, ಅವರ ದೇಹ ಚಿಕಿತ್ಸೆಗೆ ಸ್ಪಂದಿಸುತ್ತಿಲ್ಲ ಎಂದು ತಿಳಿದು ಬಂದಿದೆ. ಹೇಮಾ ಅವರ ಪುತ್ರ ಐರ್ಲೆಂಡ್​ನಲ್ಲಿದ್ದು ಅವರ ಆಗಮನಕ್ಕಾಗಿ ಕಾಯುಲಾಗುತ್ತಿದೆ ಎನ್ನಲಾಗಿದೆ.

ಡಿ.18 ನಟಿ ಲೀಲಾವತಿ ಅವರ ಪುಣ್ಯತಿಥಿಯಲ್ಲಿ ನಟಿ ಆಗಮಿಸಿ, ವಿನೋದ್ ರಾಜ್ ಅವರಿಗೆ ಸಾಂತ್ವನ ಹೇಳಿದ್ದರು. 70ರ ದಶಕದಲ್ಲೇ ಹೇಮಾ ಅವರು ಚಿತ್ರರಂಗಕ್ಕೆ ಕಾಲಿಟ್ಟ ಹೇಮಾ ಅವರು ಕನ್ನಡ ಸೇರಿದಂತೆ ತೆಲುಗು, ಮಲಯಾಳಂ ಮತ್ತು ತಮಿಳು ಸುಮಾರು 180ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.

ರಾಜಕುಮಾರ್, ವಿಷ್ಣುವರ್ಧನ್, ಅಂಬರೀಶ್‌, ಕಮಲ್ ಹಾಸನ್, ಚಿರಂಜೀವಿ, ಮೋಹನ್ ಬಾಬು, ಮಲಯಾಳಂ ಸೂಪರ್ ಸ್ಟಾರ್ ಪ್ರೇಮ್ ನಜೀರ್, ಅನಂತ್ ನಾಗ್, ಶಂಕರ್ ನಾಗ್, ರವಿಚಂದ್ರನ್ ಹೀಗೆ ಅನೇಕ ನಟರ ಜತೆ ಹೇಮಾ ಚೌಧರಿ ತೆರೆ ಹಂಚಿಕೊಂಡಿದ್ದರು.