‘ನನ್ನ ಕನಸಿನಲ್ಲಿ ಭಗವಾನ್ ರಾಮ ಬಂದು ಅಯೋಧ್ಯೆಗೆ ಹೋಗುವುದಿಲ್ಲ ಎಂದಿದ್ದಾನೆ’ ಎಂದ ತೇಜ್ ಪ್ರತಾಪ್ ಯಾದವ್
ನವದೆಹಲಿ: ‘ಭಗವಾನ್ ಶ್ರೀರಾಮ ನನ್ನ ಕನಸಿನಲ್ಲಿ ಬಂದಿದ್ದ. ಅವರೆಲ್ಲಾ ನಾಟಕ ಮಾಡುತ್ತಿದ್ದಾರೆ. ಹೀಗಾಗಿ ಜನವರಿ 22ರಂದು ನಾನು ಆಯೋಧ್ಯೆಗೆ ತೆರಳುವುದಿಲ್ಲ ಎಂದು ಭಗವಾನ್ ಶ್ರೀರಾಮ ಕನಸಿನಲ್ಲಿ ಹೇಳಿದ್ದಾನೆ’ ಎಂದು ಆರ್ಜೆಡಿ ನಾಯಕ, ಬಿಹಾರ ಸಚಿವ ತೇಜ್ ಪ್ರತಾಪ್ ಯಾದವ್ ಹೇಳಿರುವ ವಿಡಿಯೋ ಭಾರಿ ವೈರಲ್ ಆಗಿದೆ.
ಸಾರ್ವಜನಿಕ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ತೇಜ್ ಪ್ರತಾಪ್ ಯಾದವ್, ಶ್ರೀರಾಮ ಮಂದಿರ ಪ್ರಾಣಪ್ರತಿಷ್ಠೆ ಉದ್ಘಾಟನೆಯನ್ನು ಇಂಡಿಯಾ ಒಕ್ಕೂಟದ ಪಕ್ಷಗಳು ತಿರಸ್ಕರಿಸುವ ನಿರ್ಧಾರವನ್ನು ಸಮರ್ಥಿಸಿಕೊಂಡು ಮಾತನಾಡಿದ್ದಾರೆ. ಈ ವೇಳೆ ಭಗವಾನ್ ಶ್ರೀರಾಮ ನನ್ನ ಕನಸಿನಲ್ಲಿ ಪ್ರತ್ಯಕ್ಷವಾಗಿ ಕೆಲ ಮಾಹಿತಿ ನೀಡಿದ್ದಾನೆ ಎಂದು ತಿಳಿಸಿದ್ದಾರೆ.