Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನಮ್ಮ ಸಂಪ್ರದಾಯ, ವೈಭವಕ್ಕೆ ಕೊರತೆ ಇಲ್ಲದಂತೆ ದಸರಾ ಆಚರಿಸಲಾಗುವುದು’ – ಸಿದ್ದರಾಮಯ್ಯ

ಮೈಸೂರು: ಬರಗಾಲವಿದ್ದರೂ ನಮ್ಮ ಸಂಪ್ರದಾಯ ಮತ್ತು ವೈಭವಕ್ಕೆ ಕೊರತೆ ಇಲ್ಲದಂತೆ ಅರ್ಥಪೂರ್ಣ ದಸರಾ ಆಚರಿಸಲಾಗುವುದು. ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಕನ್ನಡ ನಾಡಿನ ಸಮೃದ್ಧಿ, ಪ್ರಗತಿ, ಸಂಸ್ಕೃತಿ ಮತ್ತು ವೈಭವವನ್ನು ದಸರಾ ಮೂಲಕ ನಮ್ಮ ಪರಂಪರೆ ಮತ್ತು ಹಿರಿಮೆಯನ್ನು ಜಗತ್ತಿಗೆ ಸಾರಲಾಗುವುದು. ಸಾಂಸ್ಕೃತಿಕವಾಗಿ ಬಹಳ ಶ್ರೀಮಂತ ನಾಡು ನಮ್ಮದು. ನಮ್ಮ ಜನ ಬಹಳ ಸುಸಂಸ್ಕೃತರು. ಪ್ರೀತಿ ಹಂಚುವವರು. ಎಲ್ಲಾ ಜಾತಿ ಧರ್ಮದವರನ್ನು ಅತ್ಯಂತ ಪ್ರೀತಿಯಿಂದ, ಘನತೆಯಿಂದ ನಡೆಸಿಕೊಳ್ಳುವುದು ನಮ್ಮ ಧರ್ಮ ಮತ್ತು ಕರ್ತವ್ಯ ಎಂದರು.

ಇನ್ನು ರಾಜ್ಯದ 116 ತಾಲ್ಲೂಕುಗಳಲ್ಲಿ ಮಳೆ ಇಲ್ಲದೆ ತೀವ್ರ ಬರಗಾಲದ ಸ್ಥಿತಿ ಇದೆ. ಆದ್ದರಿಂದ ಅದ್ದೂರಿ ಇಲ್ಲದ ವೈಭವಕ್ಕೆ ಕೊರತೆ ಇಲ್ಲದ ಅರ್ಥಪೂರ್ಣ ದಸರಾ ಆಚರಿಸಬೇಕು ಎನ್ನುವುದು ನಮ್ಮ ಉದ್ದೇಶ ಎಂದಿದ್ದಾರೆ.