Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನವದೆಹಲಿ: ಕಾಲೇಜಿನ ಆವಣದಲ್ಲಿ ರಾಡ್‌ನಿಂದ ಹೊಡೆದು ವಿದ್ಯಾರ್ಥಿನಿ ಕೊಲೆ

ನವದೆಹಲಿ: ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇತ್ತೀಚೆಗೆ ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಹೆಚ್ಚುತ್ತಲೇ ಇವೆ. ಈಗ ಮತ್ತೊಮ್ಮೆ ಬೀಭತ್ಸ ಕೃತ್ಯ ನಡೆದಿದೆ. ಕಾಲೇಜಿನ ಆವರಣದಲ್ಲೇ ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಹಲ್ಲೆ ಮಾಡಿ ಕೊಲೆಗೈದಿದ್ದಾರೆ. ನವದೆಹಲಿಯ ಮಾಳವಿಯಾ ನಗರದ ಕಮಲಾ ನೆಹರು ಕಾಲೇಜಿನ ಆವರಣದಲ್ಲೇ ಘಟನೆ ನಡೆದಿದೆ. 25 ವರ್ಷ ವಯಸ್ಸಿನ ವಿದ್ಯಾರ್ಥಿನಿ ಅರಬಿಂದೋ ಎಂಬಾಕೆಯೇ ಕೊಲೆಯಾದ ವಿದ್ಯಾರ್ಥಿನಿ. ಕಾಲೇಜಿನ ಆವರಣದಲ್ಲಿ ಏಕಾಏಕಿ ನುಗ್ಗಿದ ದುಷ್ಕರ್ಮಿಗಳು ವಿದ್ಯಾರ್ಥಿನಿ ಮೇಲೆ ರಾಡ್‌ನಿಂದ ಭೀಕರವಾಗಿ ಹಲ್ಲೆ ಮಾಡಿದ್ದಾರೆ. ಪರಿಣಾಮ ವಿದ್ಯಾರ್ಥಿನಿ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಸ್ಥಳಕ್ಕೆ ದಕ್ಷಿಣ ವಲಯ ಡಿಸಿಪಿ ಹಾಗೂ ಸಿಬ್ಬಂದಿ ಭೇಟಿ ನೀಡಿ ತನಿಖೆ ಆರಂಭಿಸಿದ್ದಾರೆ. ಹತ್ಯೆ ನಡೆದ ಸ್ಥಳದಲ್ಲಿ ರಕ್ತಸಿಕ್ತ ಕಬ್ಬಿಣದ ರಾಡ್ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.