‘ನಾನು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತೇನೆ’ – ಪರಮೇಶ್ವರ್
ಮಾಗಡಿ : ಯಾರು ಕೂಡ ಈ ಜಾತಿಯಲ್ಲಿ ಹುಟ್ಟಬೇಕೆಂದು ಅಂದುಕೊಂಡು ಹುಟ್ಟುವುದಿಲ್ಲ. ಮನುಷ್ಯತ್ವವನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಜಾತಿ ವ್ಯವಸ್ಥೆ ದೂರವಾಗುತ್ತದೆ. ನಾನು ಜಾತಿ ವ್ಯವಸ್ಥೆಯನ್ನು ತೀವ್ರವಾಗಿ ವಿರೋಧಿಸುತ್ತೇನೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.
ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆ ಅನಾವರಣ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಮಾಗಡಿ ಅಂಬೇಡ್ಕರ್ ಹಬ್ಬಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಾವು ಹುಟ್ಟುವಾಗ ಯಾವ ಜಾತಿಯಲ್ಲಿ ಹುಟ್ಟಬೇಕೆಂದು ಅರ್ಜಿ ಹಾಕಿಕೊಂಡು ಹುಟ್ಟುವುದಿಲ್ಲ, ಹಾಗಿದ್ದರೆ ನಾವು ಈ ಜಾತಿಯಲ್ಲಿ ಹುಟ್ಟಬೇಕು ಅಂದುಕೊಳ್ಳುತ್ತಿರಲಿಲ್ಲ ಎಂದು ಹೇಳಿದರು.
ಸಂವಿಧಾನವನ್ನು ಬದಲಾವಣೆ ಮಾಡುತ್ತೇವೆ ಎಂದು ಕೆಲವರು ಹೊರಟಿದ್ದಾರೆ. ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಹಾಕಿಕೊಟ್ಟ ಸಂವಿಧಾನದ ಮೂಲಕ ನಮಗೆ ಅನೇಕ ಸೌಲಭ್ಯಗಳು ಸಿಗುವಂತಾಗಿದೆ. ಮನುಷ್ಯತ್ವವನ್ನು ಪ್ರತಿಯೊಬ್ಬರೂ ಬೆಳೆಸಿಕೊಂಡಾಗ ಮಾತ್ರ ಜಾತಿ ವ್ಯವಸ್ಥೆ ದೂರವಾಗುತ್ತದೆ ಎಂದು ಅವರು ಹೇಳಿದರು .