ನಾನು ನನ್ನ ಮಗ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶವಿಲ್ಲ.!
ನವದೆಹಲಿ: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಕುಮಾರಸ್ವಾಮಿ ಅವರು ಮಾತನಾಡಿ ನಿಖಿಲ್ ಕುಮಾರಸ್ವಾಮಿ ಮತ್ತು ನಾನು ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ಇಲ್ಲ ಎಂದು ಹೇಳಿದರು.
ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡುವ ಉದ್ದೇಶ ನನ್ನ ಮುಂದೆ ಇಲ್ಲ. ನಾನೇನಿದ್ದರೂ ರಾಜ್ಯ ರಾಜಕಾರಣಕ್ಕೆ ಸೀಮಿತ. ನಾನು ಇಲ್ಲಿಯೇ ಇದ್ದರೆ ರಾಜ್ಯಕ್ಕೆ ಒಳ್ಳೆಯದು ಎನ್ನುವುದು ಅನೇಕ ಜನರ ಅಭಿಪ್ರಾಯ, ನನ್ನ ಅಭಿಪ್ರಾಯವೂ ಅದೇ ಆಗಿದೆ. ನಾನು ಕರ್ನಾಟಕದಲ್ಲೇ ಇರಲು ತೀರ್ಮಾನ ಮಾಡಿದ್ದೇನೆ ಎಂದರು.