Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಾಳೆ ಮಾಂಸ ಮಾರಾಟ  ನಿಷೇಧ.!

 

ಬೆಂಗಳೂರು: ರಾಮನವಮಿ ಆಚರಣೆಯ ಕಾರಣ ಬುಧವಾರ ಬೆಂಗಳೂರಿನಲ್ಲಿ ಮಾಂಸ ಮಾರಾಟ ನಿಷೇಧಿಸಿ ಬಿಬಿಎಂಪಿ  ಆದೇಶ ಹೊರಡಿಸಿದೆ.

ರಾಮ ನವಮಿಯ ಕಾರಣ ನಗರದಲ್ಲಿ ಮಾಂಸ ಮಾರಾಟ ಮತ್ತು ಪ್ರಾಣಿ ಹತ್ಯೆಯನ್ನು ನಿಷೇಧಿಸಲಾಗಿದೆ ಎಂದು ಬಿಬಿಎಂಪಿಯ ಪಶುಸಂಗೋಪನಾ ಇಲಾಖೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಸಾಮಾನ್ಯವಾಗಿ ಹಿಂದೂ ಹಬ್ಬಗಳ ಸಂದರ್ಭದಲ್ಲಿ ಬೆಂಗಳೂರಿನಲ್ಲಿ ಪ್ರತಿ ಬಾರಯೂ ಬಿಬಿಎಂಪಿ ಈ ಕ್ರಮ ಕೈಗೊಳ್ಳುತ್ತದೆ.ಹಿಂದೂ ಧರ್ಮದಲ್ಲಿ ರಾಮ ನವಮಿ ಹಬ್ಬಕ್ಕೆ ವಿಶೇಷ ಮಹತ್ವವಿದೆ. ಹಿಂದೂ ಕ್ಯಾಲೆಂಡರ್ ಪ್ರಕಾರ, ರಾಮ ನವಮಿ ಹಬ್ಬವನ್ನು ಪ್ರತಿ ವರ್ಷ ಚೈತ್ರ ಮಾಸದ ಶುಕ್ಲ ಪಕ್ಷದ ಒಂಬತ್ತನೇ ದಿನಾಂಕದಂದು ಆಚರಿಸಲಾಗುತ್ತದೆ.