Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ನಾವು ದ್ವೇಷದ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ’- ಸಿಎಂ

ಮೈಸೂರು: ನಮಗೆ ರಾಜಕೀಯದಲ್ಲಿ ದ್ವೇಷ ಗೊತ್ತಿಲ್ಲ. ನಾವು ಯಾರಾದರೂ ತಪ್ಪು ಮಾಡಿದ್ದರೆ ಅದನ್ನು ಒಪ್ಪುವುದಿಲ್ಲ. ನಾವು ದ್ವೇಷದ ರಾಜಕೀಯ ಮಾಡಿಲ್ಲ, ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮುಯ್ಯ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಅವರು, ಸುಳ್ಳೆ ಕುಮಾರಸ್ವಾಮಿ ಮನೆ ದೇವರು. ಕುಮಾರಸ್ವಾಮಿ ಹೊಟ್ಟೆಕಿಚ್ಚಿನಿಂದ ದ್ವೇಷದಿಂದ ಸುಳ್ಳು ಆರೋಪ ಮಾಡುತ್ತಿದ್ದಾರೆ. ಇವತ್ತಿನವರೆಗೆ ಯಾವುದಾದರೂ ಸತ್ಯ ಹೇಳಿದ್ದಾರಾ? ಒಂದೇ ಒಂದು ವಿಚಾರದಲ್ಲಿ ಸತ್ಯ ಹೇಳಲಿಲ್ಲ. ಕುಮಾರಸ್ವಾಮಿ ಹಿಟ್ ಅಂಡ್ ರನ್ ಮಾಡುತ್ತಾರೆ ಎಂದು ಆರೋಪಿಸಿದರು.

ನಮ್ಮ ಮಗನ ವಿಚಾರದಲ್ಲಿ ಸುಮ್ಮನೆ ಸುಳ್ಳು ಸುದ್ದಿ ಹಬ್ಬಿಸಿದ್ರು. ಮಗ ನನಗಾಗಿ ಕ್ಷೇತ್ರ ಬಿಟ್ಟು ಕೊಟ್ಟಿದ್ದಾನೆ. ಈಗ ನನ್ನ ಪರವಾಗಿ ಕ್ಷೇತ್ರದಲ್ಲಿ ಜನರ ಕೆಲಸ ಮಾಡುತ್ತಿದ್ದಾನೆ. ಜನರ ಕೆಲಸ ಮಾಡುವುದು ತಪ್ಪಾಎಂದ ಅವರು,ಕೆಡಿಪಿ ಸದಸ್ಯನಾಗಿರುವ ಕಾರಣ ಕೆಲವು ವಿಚಾರಗಳ ಬಗ್ಗೆ ನನ್ನ ಜೊತೆ ಚರ್ಚೆ ಮಾಡಿದ್ದಾನೆ. ಅದಕ್ಕೆ ಬೇರೆ ಬೇರೆ ಅರ್ಥ ಕಲ್ಪಿಸುವುದು ಏಕೆ ಎಂದು ಕುಮಾರಸ್ವಾಮಿ ವಿರುದ್ಧ ಸಿಎಂ ವಾಗ್ದಾಳಿ ನಡೆಸಿದರು.