Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಿಫಾ ಸೋಂಕಿಗೆ ತುತ್ತಾದವರ ಸಂಖ್ಯೆ 5ಕ್ಕೆ ಏರಿಕೆ: ತೀವ್ರ ಕಟ್ಟೆಚ್ಚರ

ಕೋಯಿಕ್ಕೋಡ್: ಕೇರಳದಲ್ಲಿ ನಿಫಾ ಸೋಂಕಿನ ಹಾವಳಿ ಜಾಸ್ತಿಯಾಗಿದ್ದು, ಸೋಂಕಿಗೆ ತುತ್ತಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಸೋಂಕಿಗೆ ತುತ್ತಾದವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ. ಕಲ್ಲಿಕೋಟೆಯ ಖಾಸಗಿ ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಆರೋಗ್ಯ ಕಾರ್ಯಕರ್ತರೊಬ್ಬರಿಗೆ ಬುಧವಾರ ರಾತ್ರಿ ನಿಫಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ಕೇರಳದಲ್ಲಿ ಸೋಂಕಿತರ ಸಂಪರ್ಕಕ್ಕೆ ಬಂದ 706 ಜನರನ್ನು ಅಧಿಕಾರಿಗಳು ಗುರುತಿಸಿದ್ದು, ಇವರಲ್ಲಿ 77 ಜನ ಹೆಚ್ಚು ಅಪಾಯಕಾರಿ ಕೆಟಗರಿಯಲ್ಲಿದ್ದಾರೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ನಿಫಾ ಸೋಂಕಿನಿಂದ ಬಳಲುತ್ತಿರುವವರಲ್ಲಿ 9 ವರ್ಷದ ಬಾಲಕನೊಬ್ಬನ ಸ್ಥಿತಿ ಗಂಭೀರವಾಗಿದೆ.ಕಲ್ಲಿಕೋಟೆ ಜಿಲ್ಲಾದ್ಯಂತ ಕಟ್ಟೆಚ್ಚರ ವಹಿಸಲಾಗಿದ್ದು, ಒಂಬತ್ತು ಪಂಚಾಯಿತಿಗಳನ್ನು ಕಂಟೇನ್‌ಮೆಂಟ್‌ ವಲಯಗಳು ಎಂಬುದಾಗಿ ಘೋಷಿಸಲಾಗಿದೆ.