ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ .!
ದೆಹಲಿ: ನಿರುದ್ಯೋಗಿಗಳಿಗೆ ಭರ್ಜರಿ ಗುಡ್ ನ್ಯೂಸ್ ನೀಡಿರುವ ಸ್ಟಾಫ್ ಸೆಲೆಕ್ಷನ್ ಕಮಿಷನ್ (ssc), ಕೇಂದ್ರ ಭದ್ರತಾ ಪಡೆಗಳಲ್ಲಿ 26,146 ಕಾನ್‌ಸ್ಟೆಬಲ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ.
ಪುರುಷರಿಗೆ 23,347 ಮತ್ತು ಮಹಿಳೆಯರಿಗೆ 2,799 ಹುದ್ದೆಗಳಿವೆ. ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ಇದೇ 31ರೊಳಗೆ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಗಳ ಮಾರ್ಪಾಡು ಜನವರಿ 4 ರಿಂದ 6 ರವರೆಗೆ ಲಭ್ಯವಿರುತ್ತದೆ. ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ www.ssc.nic.in