Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಿರುದ್ಯೋಗಿ ಯುವಕ/ಯುವತಿಯರಿಗೆ ಇಲ್ಲಿದೆ ಸುದ್ದಿ.!ಅಕ್ಟೋಬರ್ 16 ರಂದು ಬೃಹತ್ ಉದ್ಯೋಗ ಮೇಳ

 

ದಾವಣಗೆರೆ; ಅಕ್ಟೋಬರ್ 16 ರಂದು ಬೆಳಿಗ್ಗೆ 11 ಗಂಟೆಗೆ ನಗರದ ಮುನ್ಸಿಪಲ್ ಗ್ರೌಂಡ್ ಹತ್ತಿರ, ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಬೃಹತ್ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.

ಈ ಉದ್ಯೋಗ ಮೇಳಕ್ಕೆ ವಿವಿಧ ಜಿಲ್ಲೆ ಹಾಗೂ ರಾಜ್ಯಮಟ್ಟದಿಂದ 100-150  ಉದ್ಯೋಗದಾತರನ್ನು(Employers/companies/Industries)  ಭಾಗವಹಿಸಲಿದ್ದು, ಜಿಲ್ಲೆಯ ನಿರುದ್ಯೋಗಿ ಯುವಕ/ಯುವತಿಯರು ಉದ್ಯೋಗ ಮೇಳದಲ್ಲಿ ಭಾಗವಹಿಸಬಹುದೆಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್.ಎಂ.ವಿ ತಿಳಿಸಿದ್ದಾರೆ.