Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಿರ್ದೇಶಕನೊಂದಿಗೆ ಸಾಯಿ ಪಲ್ಲವಿ ಮದುವೆ? – ಫೋಟೋ ಹಿಂದಿನ ಸತ್ಯ ಬಯಲು

ಚೆನ್ನೈ: ದಕ್ಷಿಣ ಭಾರತದ ಚಿತ್ರರಂಗದ ಹೆಸರಾಂತ ನಟಿ ಸಾಯಿ ಪಲ್ಲವಿ ಅವರ ಮದುವೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿ ತೀವ್ರ ಚರ್ಚೆಗೆ ಕಾರಣವಾಗಿದ್ದು, ಇದೀಗ ಈ ಊಹಾಪೋಹಗಳ ಹಿಂದಿನ ಸತ್ಯ ಬಯಲಾಗಿದೆ.

ನಿರ್ದೇಶಕ ರಾಜ್‌ಕುಮಾರ್ ಪೆರಿಯಸ್ವಾಮಿ ಅವರೊಂದಿಗೆ ರಹಸ್ಯವಾಗಿ ವಿವಾಹವಾಗಿದ್ದಾರೆ ಎಂಬ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ.

ಇನ್ನು ಈ ಪೊಟೋವನ್ನು ಸಾಯಿ ಪಲ್ಲವಿ ನಟಿಸುತ್ತಿರುವ ಮುಂಬರಲಿರುವ ಚಿತ್ರ ”SK21” ಲಾಂಚಿಂಗ್ ಸಮಾರಂಭದಲ್ಲಿ ತೆಗೆದುಕೊಳ್ಳಲಾಗಿದೆ ಎಂದು ಬಹಿರಂಗವಾಗಿದ್ದು, ಚಿತ್ರದಲ್ಲಿ ಶಿವಕಾರ್ತಿಕೇಯನ್ ಅವರೊಂದಿಗೆ ನಟಿಸಿದ್ದಾರೆ.

ಸಾಯಿ ಪಲ್ಲವಿ ಮತ್ತು ನಿರ್ದೇಶಕೆ ಹೂಮಾಲೆ ಧರಿಸಿರುವ ಫೋಟೋವನ್ನು ಚಿತ್ರದ ನಿರ್ದೇಶಕ ರಾಜ್‌ಕುಮಾರ್ ಪೆರಿಯಸಾಮಿ ಹಂಚಿಕೊಂಡಿದ್ದು, ಇದು ನಿಜವಾದ ಮದುವೆಯ ಛಾಯಾಚಿತ್ರವಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ.