Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನಿರ್ಮಾಣ ಹಂತದ ಕಟ್ಟಡದ ಲಿಫ್ಟ್‌ ಕುಸಿತ- ನಾಲ್ವರು ಸಾವು, 5 ಮಂದಿಗೆ ಗಾಯ

ಉತ್ತರ ಪ್ರದೇಶ: ಗ್ರೇಟರ್ ನೋಯ್ಡಾದ ದಲ್ಲಿ ವಸತಿ ಸಂಕೀರ್ಣದಲ್ಲಿ ನಿರ್ಮಾಣ ಹಂತದಲ್ಲಿರುವ ಕಟ್ಟಡದಲ್ಲಿ ಲಿಫ್ಟ್ ಕುಸಿದು ನಾಲ್ವರು ಮೃತಪಟ್ಟಿರುವ ಘಟನೆ ನಡೆದಿದೆ.

ಗೌರ್ ನಗರದಲ್ಲಿ ಆಮ್ರಪಾಲಿ ಬಿಲ್ಡರ್ಸ್‌ನಿಂದ ನಿರ್ಮಾಣ ಕಾಮಗಾರಿ ನಡೆಯುತ್ತಿದ್ಧ ವೇಳೆ ಈ ದುರ್ಘಟನೆ ಸಂಭವಿಸಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಘಟನೆಯಲ್ಲಿ 5ಮಂದಿ ಗಾಯಗೊಂಡ ಗಂಬೀರ ಸ್ಥಿತಿಯಲ್ಲಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಘಟನೆ ಸಂಬಂಧ ತನಿಖೆ ನಡೆಯುತ್ತಿದೆ.