Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನೇಣು ಬಿಗಿದ ಸ್ಥಿತಿಯಲ್ಲಿ ಖ್ಯಾತ ಮಲಯಾಳಂ ನಟಿಯ ಮೃತದೇಹ ಪತ್ತೆ

ತಿರುವನಂತಪುರಂ: ಮನೆಯಲ್ಲೇ ನೇಣು ಬಿಗಿದ ಸ್ಥಿತಿಯಲ್ಲಿ ಹಲವಾರು ಚಿತ್ರಗಳಲ್ಲಿ ಹಾಗೂ ಧಾರಾವಾಹಿಗಳಲ್ಲಿ ನಟಿಸಿರುವ ಖ್ಯಾತ ನಟಿ ಅಪರ್ಣಾ ಪಿ.ನಾಯರ್(31) ಅವರ ಮೃತದೇಹ ಪತ್ತೆಯಾಗಿದೆ.

ಗುರುವಾರ ಸಂಜೆ ತಮ್ಮ ನಿವಾಸದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಪತ್ತೆಯಾಗಿದ್ದ ಅಪರ್ಣಾ ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಆತ್ಮಹತ್ಯೆಗೆ ಏನು ಕಾರಣ ಎಂಬುದು ಇನ್ನೂ ತಿಳಿದುಬಂದಿಲ್ಲ. ಆದರೆ ನಟಿ ಅಪರ್ಣಾ ಅವರು ಗುರುವಾರ ಸಂಜೆ ಇನ್ಸ್ಟಾಗ್ರಾಮ್ ನಲ್ಲಿ ಕೆಲವು ಪೋಸ್ಟ್ ಗಳನ್ನು ಹಾಕಿದ್ದು ಇದರಲ್ಲಿ ಆಕೆ ಮಾನಸಿಕ ಸಮಸ್ಯೆಗೆ ತುತ್ತಾಗಿದ್ದಾರೆ ಎನ್ನಲಾಗಿದೆ.

ಅಲ್ಲದೆ ಕೊನೆಯದಾಗಿ ತನ್ನ ಮಗಳ ಫೋಟೋ ವನ್ನು ಪೋಸ್ಟ್ ಮಾಡಿದ್ದಾರೆ ಎನ್ನಲಾಗಿದೆ.