ನೋಂದಾಯಿತ ಕಲಾ ಸಂಘ-ಸಂಸ್ಥೆಗಳಿಂದ ಸಹಾಯಧನಕ್ಕೆ ಅರ್ಜಿ ಆಹ್ವಾನ
ದಾವಣಗೆರೆ, : ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಸಾಮಾನ್ಯ ವಿಶೇಷ ಘಟಕ ಮತ್ತು ಗಿರಿಜನ ಉಪಯೋಜನೆಯಡಿ ನೋಂದಾಯಿತ ಕಲಾ ಸಂಘ-ಸಂಸ್ಥೆಗಳಿಗೆ ಪ್ರೋತ್ಸಾಹ ರೂಪದಲ್ಲಿ ಸಹಾಯಧನ ನೀಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಕನ್ನಡ ಭಾಷೆ, ಸಾಹಿತ್ಯ, ಸಂಗೀತ, ನೃತ್ಯ, ಜಾನಪದ, ನಾಟಕ, ಯಕ್ಷಗಾನ, ಚಿತ್ರಕಲೆ, ಶಿಲ್ಪಕಲೆ ಮುಂತಾದ ಸೃಜನಶೀಲ ಕಲಾ ಪ್ರಕಾರಗಳನ್ನು ಉಳಿಸಿ ಬೆಳೆಸುತ್ತಿರುವ ನೋಂದಾಯಿತ ಕಲಾ ಸಂಘ-ಸಂಸ್ಥೆಗಳು ಡಿಸೆಂಬರ್.13 ರೊಳಗಾಗಿ ವೆಬ್‍ಸೈಟ್ www.sevasindhu.karnataka.gov.inಮೂಲಕ ಅರ್ಜಿ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಸೇವಾಸಿಂಧು ವ್ಯವಸ್ಥಾಪಕರರ ದೂ.ಸಂ. 08022279954, 9986837037, 8792662814, 8792662816 ಅಥವಾ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ದೂ.ಸಂ.08192 234849 ಅಥವಾ ವೆಬ್‍ಸೈಟ್ www.kannadasiri.karnataka.gov.inಸಂಪರ್ಕಿಸಲು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ರವಿಚಂದ್ರ ತಿಳಿಸಿದ್ದಾರೆ.