Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನ. 13 ರಿಂದ 16 ವರೆಗೆ ಫಲಪುಷ್ಪ ಪ್ರದರ್ಶನ

 

ದಾವಣಗೆರೆ, : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ, ಜಿಲ್ಲಾ ತೋಟಗಾರಿಕೆ ಸಂಘ(ರಿ), ಇವರ ಸಂಯುಕ್ತಾಶ್ರಯದಲ್ಲಿ ನವಂಬರ್ 13 ರಂದು ಸಂಜೆ 5 ಗಂಟೆಗೆ ಶಾಮನೂರು ಸರ್ವಿಸ್ ರಸ್ತೆಯ ಸಮೀಪದ ಗಾಜಿನ ಮನೆಯಲ್ಲಿ ಫಲಪುಷ್ಪ ಪ್ರದರ್ಶನ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆÉ.

ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಅವರು ಕಾರ್ಯಕ್ರಮ ಉದ್ಘಾಟಿಸುವರು. ಶಾಸಕ ಡಾ. ಶಾಮನೂರು ಶಿವಶಂಕರಪ್ಪ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಸಂಸದ ಡಾ.ಜಿ.ಎಂ.ಸಿದ್ದೇಶ್ವರ, ಮಾಯಕೊಂಡ ಶಾಸಕರಾದ ಕೆ.ಎಸ್.ಬಸವಂತಪ್ಪ, ಜಗಳೂರು ಶಾಸಕ ಬಿ.ದೇವೇಂದ್ರಪ್ಪ, ಹೊನ್ನಾಳಿ ಶಾಸಕ ಶಾಂತನಗೌಡ ಡಿ.ಜಿ, ಚನ್ನಗಿರಿ ಶಾಸಕ ಬಸವರಾಜು ವಿ.ಶಿವಗಂಗಾ, ಹರಿಹರ ಶಾಸಕ ಬಿ.ಪಿ ಹರೀಶ್, ಮಹಾನಗರ ಪಾಲಿಕೆ ಮೇಯರ್ ವಿನಾಯಕ ಬಿ.ಹೆಚ್, ಮಹಾನಗರ ಪಾಲಿಕೆ 23ನೇ ವಾರ್ಡ್ ಸದಸ್ಯೆ ರೇಖಾ ಸುರೇಶ್ ಗಂಡ್‍ಗಾಳೆ, ವಿಧಾನ ಪರಿಷತ್ ಸದಸ್ಯರಾದ ಕೆ.ಪಿ.ನಂಜುಂಡಿ ವಿಶ್ವಕರ್ಮ, ರವಿಕುಮಾರ್.ಎನ್, ತೇಜಸ್ವಿನಿಗೌಡ, ಎಸ್.ಎಲ್.ಭೋಜೇಗೌಡ, ವೈ.ಎ ನಾರಾಯಣಸ್ವಾಮಿ, ಚಿದಾನಂದ ಎಂ.ಗೌಡ, ಡಿ.ಎಸ್ ಅರುಣ್, ಕೆ.ಎಸ್.ನವೀನ್, ಕೆ.ಅಬ್ದುಲ್ ಜಬ್ಬಾರ್,

ವಿಷೇಶ ಆಹ್ವಾನಿತರಾಗಿ ಜಿಲ್ಲಾಧಿಕಾರಿ ಡಾ. ವೆಂಕಟೇಶ್ ಎಂ.ವಿ, ಜಿಲ್ಲಾ ಪೆÇಲೀಸ್ ವರಿμÁ್ಠಧಿಕಾರಿ ಉಮಾ ಪ್ರಶಾಂತ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುರೇಶ್ ಬಿ. ಇಟ್ನಾಳ್, ತೋಟಗಾರಿಕೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ. ಶಮ್ಲ ಇಕ್ಬಾಲ್, ತೋಟಗಾರಿಕೆ ನಿರ್ದೇಶಕರಾದ  ರಮೇಶ್.ಡಿ.ಎಸ್, ಜಿಲ್ಲಾ ನೋಡಲ್ ಅಧಿಕಾರಿ ಮತ್ತು ತೋಟಗಾರಿಕೆ ಜಂಟಿ ನಿರ್ದೇಶಕ ಎಂ.ಜಗದೀಶ್, ಜಿಲ್ಲಾ ವಿಭಾಗೀಯ ತೋಟಗಾರಿಕೆ ಜಂಟಿ ನಿರ್ದೇಶಕ ಎಂ.ವಿಶ್ವನಾಥ್, ತೋಟಗಾರಿಕೆ ಉಪನಿರ್ದೇಶಕ ಜಿ.ಸಿ ರಾಘವೇಂದ್ರ ಪ್ರಸಾದ್ ಉಪಸ್ಥಿತರಿರುವರು.