Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ನ. 26ರಂದು ಕೆಸೆಟ್ ಪರೀಕ್ಷೆ ನಿಗದಿ

ಬೆಂಗಳೂರು: ನವೆಂಬರ್ 26ರಂದು ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2023 ನಡೆಸುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಅಧಿಸೂಚನೆ ಪ್ರಕಟನೆ ಹೊರಡಿಸಲಾಗಿದೆ.ಅರ್ಹ ಅಭ್ಯರ್ಥಿಗಳಿಂದ ಆನ್ ಲೈನ್ ಮೂಲಕ ಅರ್ಜಿಗೆ ಆಹ್ವಾನಿಸಲಾಗಿದೆ.

ಮೊದಲ ಪತ್ರಿಕೆ-I:ಸಾಮಾನ್ಯ ಪತ್ರಿಕೆಯು ಬೋಧನೆ ಮತ್ತು ಬುದ್ಧಿ ಸಾಮರ್ಥ್ಯ.ಈ ಪತ್ರಿಕೆಯು ಅಭ್ಯರ್ಥಿಗಳ ಸಾಮಾನ್ಯ ಪತ್ರಿಕೆಯಾಗಿದ್ದು, ಸಾಮಾನ್ಯ ಜ್ಞಾನ ಬೋಧನೆ ಹಾಗೂ ಸಂಶೋಧನೆಯ ಅಭಿರುಚಿಗೆ ಸಂಬಂಧಿಸಿರುತ್ತದೆ. ಅಭ್ಯರ್ಥಿಗಳ ಸಾಮಾನ್ಯ ತಿಳಿವಳಿಕೆಗಳನ್ನು ಗ್ರಹಿಸುವ ಹಾಗೂ ಯೋಚನಾ ಸಾಮರ್ಥ್ಯವನ್ನು ಆಳೆಯುವಂತಹದ್ದಾಗಿರುತ್ತದೆ.

ಈ ಪತ್ರಿಕೆಯು 50 ಬಹುಸಂಖ್ಯಾ ಆಯ್ಕೆಯ ಪ್ರಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪ್ರಶ್ನೆಗೆ ಎರಡು ಅಂಕಗಳಿರುತ್ತದೆ. ಹಾಗೂ ಎಲ್ಲಾ ಪ್ರಶ್ನೆಗಳಿಗೂ ಕಡ್ಡಾಯವಾಗಿ ಉತ್ತರಿಸಬೇಕು.

ಎರಡನೇ ಪತ್ರಿಕೆ-II:ವಿಷಯ ಪತ್ರಿಕೆ. ಅಭ್ಯರ್ಥಿಯು ಆಯ್ಕೆ ಮಾಡಿದ ವಿಷಯದ ಸಾಮಾನ್ಯ ಜ್ಞಾನದಲ್ಲಿ ಈ ಪತ್ರಿಕೆ ಇರುತ್ತದೆ. ಈ ಪತ್ರಿಕೆಯು 100 ಕಡ್ಡಾಯ ಬಹುಸಂಖ್ಯಾ ಆಯ್ಕೆ ಪಶ್ನೆಗಳನ್ನು ಒಳಗೊಂಡಿದ್ದು, ಪ್ರತಿ ಪಶ್ನೆಗೂ 2 ಅಂಕಗಳಿರುತ್ತವೆ, ಗರಿಷ್ಠ 200 ಅಂಕಗಳಿರುತ್ತವೆ.

ಅರ್ಹ ಅಭ್ಯರ್ಥಿಗಳು https://kea.kar.nic.in ಜಾಲತಾಣಕ್ಕೆ ಭೇಟಿ ನೀಡಿ. ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದಾಗಿದೆ.ಅಲ್ಲದೇ ಕೇವಲ ಗಣಕೀಕೃತ ಅಂಚೆ ಕಚೇರಿಯ ಶಾಖೆಗಳಲ್ಲಿ ಮಾತ್ರ ಅರ್ಜಿ ಶುಲ್ಕ ಪಾವತಿಸುವಂತೆ ತಿಳಿಸಿದೆ.

ಕೆಸೆಟ್-2023ರ ಪರೀಕ್ಷೆಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ದಿನಾಂಕ 11-09-2023ರ ಇಂದಿನಿಂದ ಆರಂಭಗೊಳ್ಳಲಿದೆ. ಅರ್ಜಿ ಸಲ್ಲಿಸಲು ಸೆಪ್ಟೆಂಬರ್​​ 30 ಕೊನೆಯ ದಿನವಾಗಿದೆ. ಇ-ಪೋಸ್ಟ್ ಆಫೀಸ್​ನಲ್ಲಿ ಶುಲ್ಕ ಪಾವತಿಸಲು 03- 10-2023 ಕೊನೆಯ ದಿನವಾಗಿದೆ.

ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆಗೆ ಸಾಮಾನ್ಯ ವರ್ಗ, ಪ್ರವರ್ಗ-2ಎ, 2ಬಿ, 3ಎ, 3ಬಿ ಅವರಿಗೆ 1000 ಸಾವಿರ ರೂ.
ಪ್ರವರ್ಗ-1, ಎಸ್ಸಿ, ಎಸ್ಟಿ, ಪಿಡಬ್ಲೂಡಿ, ಲಿಂಗ ಅಲ್ಪಸಂಖ್ಯಾತರಿಗೆ 700 ರೂ. ಶುಲ್ಕ ನಿಗದಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಇಎ ವೆಬ್ ಸೈಟ್​ಗೆ ಭೇಟಿ ನೀಡಲು ಸೂಚನೆ ನೀಡಲಾಗಿದೆ.