ಪತಿಗೆ ವಿಚ್ಛೇದನ ನೀಡಿದ ನಿರೂಪಕಿ ಚೈತ್ರಾ ವಾಸುದೇವನ್
ಬೆಂಗಳೂರು : ಬಿಗ್ ಬಾಸ್ ಕನ್ನಡ 7 ಖ್ಯಾತಿಯ ಚೈತ್ರಾ ವಾಸುದೇವನ್ ಅವರು ತಮ್ಮ ಪತಿ ಸತ್ಯ ನಾಯ್ಡು ಅವರಿಂದ ವಿಚ್ಛೇದನವನ್ನು ಪಡೆದಿದ್ದಾರೆ. ಈ ಕುರಿತಾಗಿ ಇನ್ಸ್ಟಾಗ್ರಾಮ್ನಲ್ಲಿ ಭಾವನಾತ್ಮಕವಾಗಿ ಬರೆದುಕೊಳ್ಳುವ ಮೂಲಕವಾಗಿ ತಮ್ಮ ಅಭಿಮಾನಿಗಳ ಬಳಿ ಹೇಳಿಕೊಂಡಿದ್ದಾರೆ. ‘ಎಲ್ಲರಿಗೂ ನಮಸ್ಕಾರ. ಹಲವಾರು ತಿಂಗಳುಗಳಿಂದ ಸಾಕಷ್ಟು ಯೋಚಿಸಿದ ನಂತರ ನಾನು ನನ್ನ ವಿಚ್ಛೇದನದ ಬಗ್ಗೆ ನಿಮಗೆ ಹೇಳಲು ಧೈರ್ಯವನ್ನು ತೆಗೆದುಕೊಂಡಿದ್ದೇನೆ. ಸತ್ಯ ಮತ್ತು ನಾನು ಬೇರೆಯಾಗಿದ್ದೇವೆ. ನಿಂದನೆ /ದ್ವೇಷ ಬೇಡ ಎಂದು ನಿಮ್ಮಲ್ಲಿ ವಿನಂತಿಸಿಕೊಳ್ಳುತೇನೆ. ನನ್ನ ಈ ಸ್ಥಿತಿಯಿಂದ ಹೊರಬರಲು ಕಷ್ಟ ಪಡುತ್ತಿದ್ದೇನೆ. ಕೆಲಸ ಮಾತ್ರ ಜೀವನದಲ್ಲಿ ಮುನ್ನಡೆಯಲು ಸಹಾಯ ಮಾಡುತ್ತದೆ. ನಾನು ಈವೆಂಟ್ ಮತ್ತು ಟಿವಿ ಉದ್ಯಮದಲ್ಲಿ 10 ವರ್ಷಗಳಿಂದ ಕೆಲಸ ಮಾಡಿದ್ದೇನೆ. ನನ್ನ ಸೇವೆಯನ್ನು ಇನ್ನುಮುಂದೆಯೂ ಮುಂದುವರಿಸಲು ಬಯಸುತ್ತೇನೆ ಮತ್ತು ನಿಮ್ಮಿಂದ ಹೆಚ್ಚಿನ ಪ್ರೀತಿ ಮತ್ತು ಬೆಂಬಲಕ್ಕಾಗಿ ಎದುರು ನೋಡುತ್ತಿದ್ದೇನೆ’ ಎಂದು ಚೈತ್ರಾ ಬರೆದುಕೊಂಡಿದ್ದಾರೆ.