Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡಿದ ಕುಸ್ತಿಪಟು ವಿರೇಂದ್ರ ಸಿಂಗ್

ನವದೆಹಲಿ: ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಬ್ರಿಜ್ ಭೂಷಣ್ ಸಿಂಗ್ ನಿಕಟವರ್ತಿಯೊಬ್ಬರು ಕುಸ್ತಿ ಫೆಡರೇಷನ್ ಗೆ ಆಯ್ಕೆಯಾಗಿರುವುದನ್ನು ವಿರೋಧಿಸಿ ಕುಸ್ತಿಪಟು ಬಜರಂಗ ಪುನಿಯಾ ತಮ್ಮ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡಿದ ಬೆನ್ನಲ್ಲೇ, ಗೂಂಗಾ ಪೈಲ್ವಾನ್ ಎಂದು ಹೇಳಿಕೊಳ್ಳುವ ವಿರೇಂದ್ರ ಸಿಂಗ್ ಅವರೂ ತಮ್ಮ ಪದ್ಮಶ್ರೀ ಪ್ರಶಸ್ತಿ ವಾಪಸ್ ಮಾಡುವುದಾಗಿ ಘೋಷಿಸಿದ್ದಾರೆ.

ಅನ್ಯಾಯವನ್ನು ವಿರೋಧಿಸಿ ನಿವೃತ್ತಿ ಘೋಷಿಸಿದ ಸಾಕ್ಷಿ ಮಲಿಕ್ ಅವರಿಗೆ ಬೆಂಬಲ ನೀಡುವುದಕ್ಕಾಗಿ ಪದ್ಮಶ್ರೀ ಪ್ರಶಸ್ತಿ ವಾಪಸ್ ನೀಡುತ್ತಿರುವುದಾಗಿ ವೀರೇಂದ್ರ ಸಿಂಗ್ ಅವರು ಹೇಳಿದ್ದಾರೆ. ನನ್ನ ಸಹೋದರಿ ಹಾಗೂ ದೇಶ ಪುತ್ರಿ ಸಾಕ್ಷಿ ಮಲಿಕ್ ಗಾಗಿ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಮಾಡುತ್ತಿದ್ದೇನೆ ಎಂದು ರೇಂದರ ಸಿಂಗ್ ಅವರು ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

ಈ ಟ್ವೀಟ್ ಅನ್ನು ಕ್ರಿಕೆಟಿಗ ಸಚಿನ್ ತೆಂಡೂಲ್ಕರ್ ಹಾಗೂ ಒಲಂಪಿಕ್ ಪದಕ ವಿಜೇತ ನೀರಜ್ ಛೋಪ್ರಾ ಅವರಿಗೆ ಟ್ಯಾಗ್ ಮಾಡಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟಕ್ಕೆ ಮಾಜಿ ಅಧ್ಯಕ್ಷ ಬ್ರಿಜ್ಭೂಷಣ್ ಸಿಂಗ್ ಅವರ ಆಪ್ತ ಸಂಜಯ್ ಸಿಂಗ್ ಆಯ್ಕೆಯಾದ ಬಳಿಕ ಅಂತಾರಾಷ್ಟ್ರೀಯ ಕುಸ್ತಿಪಟುಗಳ ಬಣವೊಂದು ವ್ಯವಸ್ಥೆಯ ವಿರುದ್ಧ ತಿರುಗಿ ಬಿದ್ದಿದೆ.

ಮಾಜಿ ಒಲಿಂಪಿಯನ್ ಸಾಕ್ಷಿ ಮಲಿಕ್ ಗುರವಾರ ತಮ್ಮ ಬೂಟ್ ಮೇಜಿನ ಮೇಲಿಟ್ಟು ನಿವೃತ್ತಿ ಘೋಷಿಸಿದ್ದರೆ, ಶುಕ್ರವಾರ ವಿಶ್ವ ಚಾಂಪಿಯನ್ ಬಜ್ರಂಗ್ ಪೂನಿಯಾ ತಮಗೆ ಸಿಕ್ಕ ಪದ್ಮಶ್ರೀ ಪ್ರಶಸ್ತಿಯನ್ನು ಮರಳಿಸುವುದಾಗಿ ಘೋಷಿಸಿದ್ದಾರೆ. ಪ್ರಶಸ್ತಿಯನ್ನು ನೀಡಲು ಹೋಗುತ್ತಿದ್ದ ಅವರಿಗೆ ತಡೆಯೊಡ್ಡಿದ್ದ ಕಾರಣ ಪದಕವನ್ನು ಅವರು ನವದೆಹಲಿಯ ಕರ್ತವ್ಯ ಪಥದ ಫುಟ್ಪಾತ್ನಲ್ಲಿಟ್ಟು ಮರಳಿದ್ದಾರೆ.