Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪಶ್ಚಿಮ ಬಂಗಾಳ: ಟಿಎಂಸಿ ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ

ಪಶ್ಚಿಮ ಬಂಗಾಳ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿರುವ ಘಟನೆ ನಡೆದಿದೆ.

ಜಿಯಾರುಲ್ ಮೊಲ್ಲಾ ಮೃತ ಕಾರ್ಯಕರ್ತ. ಇನ್ನು ಜಿಯಾರುಲ್ ಮೊಲ್ಲಾ ಅವರು ಯುವ ತೃಣಮೂಲ ಕಾಂಗ್ರೆಸ್ ಸದಸ್ಯನಾಗಿದ್ದು, ಕಳೆದ ಕೆಲ ದಿನಗಳಿಂದ ನಿರಂತರವಾಗಿ ಅವರಿಗೆ ಬೆದರಿಕೆಗಳು ಬರುತ್ತಿದ್ದವು. ರಾಜಕೀಯ ವಿಚಾರಕ್ಕೆ ಸಂಬಂಧಿಸಿ ಅವರನ್ನು ಹತ್ಯೆ ಮಾಡಲಾಗಿದೆ ಎಂದು ಮೃತರ ಕುಟುಂಬಸ್ಥರು ಪೊಲೀಸರ ಬಳಿ ಆರೋಪಿಸಿದ್ದಾರೆ.

ಕಾರು – ಈಚರ್ ನಡುವೆ ಭೀಕರ ಅಪಘಾತ: ಸಜೀವ ದಹನವಾದ ಚಾಲಕ

ರಸ್ತೆಯೊಂದರಲ್ಲಿ ಗುಂಡಿನ ಗಾಯದಿಂದ ಬಿದ್ದಿದ್ದ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಗಂಭೀರ ಸ್ವರೂಪದ ಗಾಯದಿಂದ ಅವರು ಆದಾಗಲೇ ಮೃತಪಟ್ಟಿರುವುದಾಗಿ ವೈದ್ಯರು ಹೇಳಿದ್ದಾರೆ.