ಪೌರಕಾರ್ಮಿಕರಿಗೆ ಸಿಹಿ ಸುದ್ದಿ .!
ಬೆಳಗಾವಿ: ಹೌದು ರಾಜ್ಯದಲ್ಲಿ ಶೇಕಡಾ 70ರಷ್ಟು ಪೌರಕಾರ್ಮಿಕರನ್ನು ಖಾಯಂಗೊಳಿಸಲಾಗಿದೆ. ಮುಂದಿನ ಹಂತದಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಎಲ್ಲರನ್ನೂ ಖಾಯಂಗೊಳಿಸಲಾಗುವುದು ಎಂದು ಸಚಿವ ರಹೀಂ ಖಾನ್ ಭರವಸೆ ನೀಡಿದ್ದಾರೆ.
ಅವರು ಇಂದು ನಗರಾಭಿವೃದ್ದಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯ ಬೆಂಗಳೂರು ಹಾಗೂ ಜಿಲ್ಲಾಡಳಿತ ಇವರ ಸಂಯುಕ್ತಾಶ್ರಯದಲ್ಲಿ ಮಂಗಳವಾರ ನಡೆದ ಪೌರಕಾರ್ಮಿಕರಿಗೆ ನೇಮಕಾತಿ ಆದೇಶ ಪತ್ರ ವಿತರಣಾ ಕಾರ್ಯಕ್ರಮದಲ್ಲಿ 368 ಪೌರಕಾರ್ಮಿಕರ ನೇಮಕಾತಿ ಆದೇಶಪತ್ರಗಳನ್ನು ವಿತರಿಸಿದ ಬಳಿಕ ಅವರು ಮಾತನಾಡಿದರು, ಇದೇ ವೇಳೇ ಅವರು ಮಾತನಾಡಿ, ಮುಂದಿನ ದಿನಗಳಲ್ಲಿ ಸರ್ಕಾರದ ಮಾರ್ಗಸೂಚಿ ಅನ್ವಯ ಹಂತ ಹಂತವಾಗಿ ಎಲ್ಲರನ್ನು ಖಾಯಂಗೊಳಿಸಿ ನೇಮಕಾತಿ ಆದೇಶ ಪತ್ರ ನೀಡಲಾಗುವುದು ಎಂದು ಅಂತ ತಿಳಿಸಿದರು.