Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರತಿಭಾ ಕಾರಂಜಿಯಲ್ಲಿ ಭೂತದ ಕೋಲಕ್ಕೆ ಅವಕಾಶ -ವಿವಾದಕ್ಕೆ ಕಾರಣವಾದ ಶಿಕ್ಷಣ ಇಲಾಖೆಯ ಸುತ್ತೋಲೆ ..!

ಕಾರ್ಕಳ : ಈ ವರ್ಷ ಪ್ರತಿಭಾ ಕಾರಂಜಿ ದೊಡ್ಡ ಮಟ್ಟದಲ್ಲಿ ನಡೆಸಲು ಸಿದ್ಧತೆಗಳಾಗುತ್ತಿದ್ದು, ಶಿಕ್ಷಣ ಇಲಾಖೆಯು ಜೂ. 19ರಂದು ಸುತ್ತೋಲೆ ಹೊರಡಿಸಿ ಈ ವರ್ಷದ ಪ್ರತಿಭಾ ಕಾರಂಜಿಯ ದಿನಾಂಕವನ್ನು ಘೋಷಣೆ ಮಾಡಿದೆ. ಆದರೆ ಸುತ್ತೋಲೆಯಲ್ಲಿ ಜಾನಪದ ನೃತ್ಯ ವಿಭಾಗದಲ್ಲಿ ಭೂತದ ಕೋಲಕ್ಕೆ ಅವಕಾಶ ನೀಡಿರುವುದು ವಿವಾದಕ್ಕೆ ಕಾರಣವಾಗುವ ಸಾಧ್ಯತೆ ನಿಚ್ಚಳವಾಗಿ ಕಂಡುಬರುತ್ತಿದೆ.

ಜುಲೈ ತಿಂಗಳಲ್ಲಿ ಶಾಲಾ ಮಟ್ಟ, ಆಗಸ್ಟ್ ತಿಂಗಳಲ್ಲಿ ಕ್ಲಸ್ಟರ್ ಮಟ್ಟ, ಮುಂದೆ ಜಿಲ್ಲಾ ಮಟ್ಟ ಹಾಗೂ ರಾಜ್ಯಮಟ್ಟದಲ್ಲಿಯೂ ಸ್ಪರ್ಧೆಗೆ ಅವಕಾಶ ಕಲ್ಪಿಸಲಾಗಿದೆ. ಇದು ವಿದ್ಯಾರ್ಥಿಗಳ ಪ್ರತಿಭೆ ಅನಾವರಣಕ್ಕೆ ಒಂದು ಉತ್ತಮ ವೇದಿಕೆಯಾಗಿದೆ.

ವಿವಾಹವಾಗದವರಿಗೆ ಸರಕಾರದಿಂದ ಸಿಗಲಿದೆ’ಬ್ರಹ್ಮಚಾರಿ’ ಪಿಂಚಣಿ..!

ಜಾನಪದ ನೃತ್ಯವು ಸಮೂಹ ವಿಭಾಗವಾಗಿದ್ದು ಅದರಲ್ಲಿ ಬುಡಕಟ್ಟು, ಜಾನಪದ, ಪಾರಂಪರಿಕ ಕಲೆಗಳನ್ನು ಪ್ರದರ್ಶಿಸಬೇಕು ಎಂದು ಇಲಾಖೆ ಆದೇಶದಲ್ಲಿ ತಿಳಿಸಿದೆ. ಅಷ್ಟೇ ಹೇಳಿ ಮುಗಿಸಿದ್ದರೆ ವಿವಾದ ಆಗುತ್ತಿರಲಿಲ್ಲ. ಆದರೆ ಅದೇ ಸುತ್ತೋಲೆಯಲ್ಲಿ ಗೊರವರ ಕುಣಿತ, ವೀರಗಾಸೆ, ಡೊಳ್ಳು ಕುಣಿತ, ಯಕ್ಷಗಾನ ಇತ್ಯಾದಿ ಉದಾಹರಣೆಗಳನ್ನು ನೀಡಲಾಗಿದೆ. ಕೊನೆಯಲ್ಲಿ ಭೂತದ ಕೋಲ (ಭೂತದ ಕೋಲು ಎಂದು ಆದೇಶದಲ್ಲಿದೆ ?) ಕ್ಕೆ ಈ ಬಾರಿ ಅನುಮತಿ ನೀಡಲಾಗಿದೆ ಎಂಬ ಉಲ್ಲೇಖ ಇದೆ. ಇದು ತುಳುನಾಡಿನ ಜನರ ನಂಬಿಕೆಗಳಿಗೆ ನೋವು ಉಂಟುಮಾಡುವ ಸಂಗತಿಯಾಗಿದೆ.