Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರಥಮ ಮುದ್ರಣ ಪುಸ್ತಕಗಳ ಆಯ್ಕೆಗೆ ಅರ್ಜಿ ಆಹ್ವಾನ

 

ಹೊಸಪೇಟೆ: ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಗ್ರಂಥಾಲಯಗಳಿಗೆ 2023ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ವಿವಿಧ ಪ್ರಕಾರದ ಪುಸ್ತಕಗಳ ಆಯ್ಕೆಗಾಗಿ ಅರ್ಜಿ ಆಹ್ವಾನಿಸಲಾಗಿದೆ.

ಸಾಹಿತ್ಯ, ಕಲೆ, ವಿಜ್ಞಾನ, ವೃತ್ತಿ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಆದಾಯ ಉತ್ಪಾದನಾ ಯೋಜನೆ, ಸ್ಪರ್ಧಾತ್ಮಕ, ಪಠ್ಯ ಪುಸ್ತಕ, ಸಾಂದರ್ಭಿಕ ಮತ್ತು ಪರಾಮರ್ಶನ ಕೃತಿಗಳು ಹಾಗೂ ಮಕ್ಕಳ ಸಾಹಿತ್ಯ, ನವಸಾಕ್ಷರರ ಕೃತಿಗಳು ಇತ್ಯಾದಿ ವಿಷಯಗಳನ್ನು ಕನ್ನಡ, ಆಂಗ್ಲ, ಇತರೆ ಭಾರತೀಯ ಭಾಷೆಗಳ ಗ್ರಂಥಗಳ ಆಯ್ಕೆಗಾಗಿ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪ್ರಕಟಣಾ ಸಂಸ್ಥೆಗಳು ಪುಸ್ತಕ ಆಯ್ಕೆ ಸಮಿತಿಯಿಂದ ಅರ್ಜಿ ಸಲ್ಲಿಸಬಹುದಾಗಿದೆ.

ಅರ್ಜಿಯನ್ನು ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ, ನಗರ ಕೇಂದ್ರ ಗ್ರಂಥಾಲಯ, ಹೊಸಪೇಟೆ ಇಲ್ಲಿ ಪಡೆಯಬಹುದು. 2023ನೇ ವರ್ಷದಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟವಾದ ಪುಸ್ತಕಗಳನ್ನು ಗ್ರಂಥ ಸ್ವಾಮ್ಯ ವಿಭಾಗ, ರಾಜ್ಯ ಕೇಂದ್ರ ಗ್ರಂಥಾಲಯ, ಬೆಂಗಳೂರು ಇಲ್ಲಿ 31.01.2024ರ ಒಳಗಾಗಿ ಕಾಪಿರೈಟ್ ಮಾಡಿಸಿರುವ ಪುಸ್ತಕಗಳನ್ನು ಮಾತ್ರ ಆಯ್ಕೆಗಾಗಿ ಅರ್ಜಿಯೊಂದಿಗೆ ಪುಸ್ತಕದ ಒಂದು ಪ್ರತಿಯನ್ನು ನಿರ್ದೇಶಕರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ 4ನೇ ಮಹಡಿ ಡಾ|| ಅಂಬೇಡ್ಕರ ವಿಧಿ ಬೆಂಗಳೂರು, ಈ ವಿಳಾಸಕ್ಕೆ 2024ರ ಫೆಬ್ರವರಿ 5ರ ಸಂಜೆ 5 ಗಂಟೆಯೊಳಗಾಗಿ ಸಲ್ಲಿಸಬೇಕು.

ಮಾಹಿತಿಗಾಗಿ ದೂ.ಸಂ: 080-22864990/ 22867358 ಕ್ಕೆ ಸಂಪರ್ಕಿಸಬಹುದಾಗಿದೆ ಎಂದು ಹೊಸಪೇಟೆ ನಗರ ಕೇಂದ್ರ ಗ್ರಂಥಾಲಯ ಮುಖ್ಯ ಗ್ರಂಥಾಲಯಾಧಿಕಾರಿ ವಿನೋದರಾಜ್ ಎಸ್. ಪ್ರಕಟಣೆಯಲ್ಲಿ ತಿಳಿಸಿದ್ದಾರೆ.