Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರಧಾನಿ ಮೋದಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರೀಕ ಪ್ರಶಸ್ತಿ

ಫ್ರಾನ್ಸ್: ಫ್ರಾನ್ಸ್ ಪ್ರವಾಸದಲ್ಲಿರುವ ಪ್ರಧಾನಿ ಮೋದಿಯವರಿಗೆ ಫ್ರಾನ್ಸ್ ನ ಅತ್ಯುನ್ನತ ನಾಗರಿಕ ಪ್ರಶಸ್ತಿಯಾದ ಗ್ರ್ಯಾಂಡ್ ಕ್ರಾಸ್ ಆಫ್ ದಿ ಲೀಜನ್ ಆಫ್ ಆನರ್ ಅನ್ನು ನೀಡಿ ಗೌರವಿಸಲಾಗಿದೆ.

ಫ್ರಾನ್ಸ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ಅವರು ಪ್ರಧಾನಿ ಮೋದಿ ಅವರಿಗೆ ಈ ಗೌರವ ಪ್ರದಾನ ಮಾಡಿದ್ದಾರೆ. ಪ್ರಧಾನಿ ಮೋದಿ ಈ ಗೌರವಕ್ಕೆ ಪಾತ್ರರಾದ ಮೊದಲ ಭಾರತೀಯ ಪ್ರಧಾನಿ ಎನಿಸಿಕೊಂಡಿದ್ದಾರೆ. ಪ್ರಧಾನಿ ಮೋದಿಯವರಿಗಿಂತ ಮೊದಲು ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ನೆಲ್ಸನ್ ಮಂಡೇಲಾ, ಆಗಿನ ವೇಲ್ಸ್ ರಾಜಕುಮಾರ ಕಿಂಗ್ ಚಾರ್ಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಏಂಜೆಲಾ ಮರ್ಕೆಲ್, ವಿಶ್ವಸಂಸ್ಥೆಯ ಮಾಜಿ ಪ್ರಧಾನ ಕಾರ್ಯದರ್ಶಿ, ಆಗಿನ ಪ್ರಿನ್ಸ್ ಆಫ್ ವೇಲ್ಸ್, ಜರ್ಮನಿಯ ಮಾಜಿ ಚಾನ್ಸೆಲರ್ ಇತರ ನಾಯಕರು ಈ ಪ್ರಶಸ್ತಿಗೆ ಪಾತ್ರರಾಗಿದ್ದರು. ಇಂದು ಫ್ರಾನ್ಸ್ನಲ್ಲಿ ನಡೆಯಲಿರುವ ವಾರ್ಷಿಕ ಬಾಸ್ಟಿಲ್ ಡೇ ಪರೇಡ್‌ನಲ್ಲಿ ಮೋದಿ ಅತಿಥಿಯಾಗಿ ಭಾಗವಹಿಸಲಿದ್ದಾರೆ.

ಬೆಂಗಳೂರು ಜೋಡಿ ಕೊಲೆ: ಸುಪಾರಿ ನೀಡಿದ್ದ ಆರೋಪದಡಿ ಜಿ-ನೆಟ್ ಕಂಪನಿ ಮಾಲೀಕನ ಬಂಧನ

ಇದರ ಜತೆಗೆ ಈ ಬಾಸ್ಟಿಲ್ ಡೇ ಪರೇಡ್ನಲ್ಲಿ 269 ಸೈನಿಕರನ್ನೊಳಗೊಂಡ ಭಾರತೀಯ ತ್ರಿ-ಸೇವಾ ತುಕಡಿಯೂ ಭಾಗವಹಿಸಲಿದೆ.ಪ್ರಧಾನಿ ಮೋದಿ ಅವರು ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ರಕ್ಷಣೆ, ಬಾಹ್ಯಾಕಾಶ, ವ್ಯಾಪಾರ ಮತ್ತು ಹೂಡಿಕೆ ಸೇರಿದಂತೆ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರದ ಕುರಿತು ಮಾತುಕತೆ ನಡೆಸಲಿದ್ದಾರೆ.