Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರಧಾನಿ ಮೋದಿ ಬಯೋಪಿಕ್ ಟೈಟಲ್ ಇದು.!

 

ದೆಹಲಿ: ಶೀಘ್ರದಲ್ಲೇ ಪ್ರಧಾನಿ ಮೋದಿ ಅವರ ಜೀವನಾಧಾರಿತ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಸಿ.ಎಚ್.ಕ್ರಾಂತಿ ಕುಮಾರ್ ನಿರ್ದೇಶನ ಮಾಡಲಿರುವ ಈ ಚಿತ್ರಕ್ಕೆ ‘ವಿಶ್ವನೇತ’ ಎಂದು ಟೈಟಲ್ ಫೈನಲ್ ಮಾಡಲಾಗಿದೆ.

ವಂದೇ ಮೀಡಿಯಾ ಪ್ರೈವೇಟ್ ಲಿಮಿಟೆಡ್ ಬ್ಯಾನರ್‌ ಅಡಿಯಲ್ಲಿ ಕಾಶಿರೆಡ್ಡಿ ಶರತ್ ರೆಡ್ಡಿ ನಿರ್ಮಿಸಿರುವ ಈ ಸಿನಿಮಾ ಪ್ಯಾನ್ ಇಂಡಿಯಾ ಮಟ್ಟದಲ್ಲಿ ಬಿಡುಗಡೆಯಾಗಲಿದೆ. ಅಭಯ್ ಡಿಯೋಲ್‌, ನೀನಾ ಗುಪ್ತಾ, ಅನುಪಮ್ ಖೇರ್ ಮತ್ತು ಪಲ್ಲವಿ ಜೋಶಿ ಇದರಲ್ಲಿ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ.