Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರಪಾತಕ್ಕೆ ಬಸ್ ಬಿದ್ದು 8 ಮಂದಿ ಸಾವು.! ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ಪರಿಹಾರ.!

 

 

ಚೆನ್ನೈ :ತಮಿಳುನಾಡಿನ  ನೀಲಗಿರಿ ಜಿಲ್ಲೆಯ ಕೂನೂರು ಬಳಿಯ ಮರಪಾಲಂನಲ್ಲಿ ಪ್ರಪಾತಕ್ಕೆ ಪ್ರವಾಸಿ ಬಸ್​ ಬಿದ್ದು 8 ಜನ ಮೃತಪಟ್ಟಿದ್ದಾರೆ. 35 ಜನರಿಗೆ ಗಾಯಗಳಾಗಿದ್ದು, ಕೂನೂರು ಆಸ್ಪತ್ರೆಗೆ ದಾಖಲಿಸಲಾಗಿದೆ.

ಪ್ರವಾಸಿ ಬಸ್​ನಲ್ಲಿ ಒಟ್ಟು 55 ಜನ ಪ್ರಯಾಣಿಸುತ್ತಿದ್ದ ಮಾಹಿತಿ ದೊರೆತಿದೆ. ಮೃತರಿಗೆ ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್  ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಗಳಿಗೆ ತಲಾ 1 ಲಕ್ಷ ರೂ. ಪರಿಹಾರ ಹಾಗೂ ಗಾಯಾಳುಗಳ ಚಿಕಿತ್ಸೆಗೆ ತಲಾ 50 ಸಾವಿರ ರೂ. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಅಧಿಕಾರಿಗಳಿ ಸೂಚಿಸಿದ್ದಾರೆ ಎಂದು ತಿಳಿದುಬಂದಿದೆ.