Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ್ರಾಥಮಿಕ ಶಾಲಾ ಹಂತದಲ್ಲಿ NEP ಜಾರಿ ಮಾಡಲ್ಲ- ಮಧು ಬಂಗಾರಪ್ಪ

ಬೆಂಗಳೂರು: ಯಾವುದೇ ಕಾರಣಕ್ಕೂ ಪ್ರಾಥಮಿಕ ಶಾಲಾ ಹಂತದಲ್ಲಿ ಎನ್‌ಇಪಿ (NEP )ಜಾರಿ ಮಾಡೋದಿಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಪ್ರಣಾಳಿಕೆಯಲ್ಲಿ NEP ರದ್ದು ಮಾಡುವುದಾಗಿ ಭರವಸೆ ನೀಡಿದ್ದೆವು. ಭರವಸೆ ನೀಡಿದಂತೆ NEP ರದ್ದು ಮಾಡುತ್ತೇವೆ ಎಂದರು. ಪ್ರಾಥಮಿಕ ಶಾಲಾ ಹಂತದಲ್ಲಿ ಹಿಂದಿನ ಬಿಜೆಪಿ ಸರ್ಕಾರ NEP ಜಾರಿಗೆ ಸಿದ್ಧತೆ ಮಾಡಿತ್ತು. ಆದರೆ ನಾವು ಅದನ್ನು ಜಾರಿ ಮಾಡೋದಿಲ್ಲ.

ಬೆಳ್ತಂಗಡಿ: ಕೊರಗಜ್ಜನ ಗುಡಿಗೆ ಬೆಂಕಿಯಿಟ್ಟ ಕಿಡಿಗೇಡಿಗಳು

NEP ಬದಲಾಗಿ ಹೊಸ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ ಎಂದು ತಿಳಿಸಿದರು. ನಾವು ಮತ್ತು ಉನ್ನತ ಶಿಕ್ಷಣ ಇಲಾಖೆ ಸಚಿವರು ಇಬ್ಬರು ಚರ್ಚೆ ಮಾಡಿ NEP ರದ್ದು ಮಾಡಿ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡುತ್ತೇವೆ. ಮುಂದಿನ ಶೈಕ್ಷಣಿಕ ವರ್ಷದಿಂದ ರಾಜ್ಯ ಶಿಕ್ಷಣ ನೀತಿ ಜಾರಿ ಮಾಡೋ ಯೋಜನೆ ಇದೆ. ಇದಕ್ಕೆ ಬೇಕಾದ ಸಿದ್ಧತೆಗಳನ್ನು ಪ್ರಾರಂಭ ಮಾಡುತ್ತೇವೆ. ಶಿಕ್ಷಣ ನೀತಿ ರೂಪಿಸಲು ತಜ್ಞರ ಸಮಿತಿ ರಚನೆ ಮಾಡಿತ್ತೇವೆ ಎಂದರು.