Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

ಪ.ಜಾತಿ ಹಾಗೂ ಪ.ಪಂಗಡದ ಅಭ್ಯರ್ಥಿಗಳಿಗೆ ಉದ್ಯಮಶೀಲತಾ ತರಬೇತಿ ಶಿಬಿರ

 

ದಾವಣಗೆರೆ; ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಸೆಪ್ಟೆಂಬರ್ 26 ರಂದು ನಗರದ ದೇವರಾಜ ಅರಸು ಬಡಾವಣೆ ಎ. ಬ್ಲಾಕ್‍ನ #297 ಸ್ಪೂರ್ತಿ ಸಾಮಾಜಿಕ ಶೈಕ್ಷಣಿಕ ಅಭಿವೃದ್ಧಿ ಸಂಸ್ಥೆಯಲ್ಲಿ ಒಂದು ದಿನದ ಉದ್ಯಮಶೀಲತಾ ತಿಳುವಳಿಕೆ ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ.

ಬೆಂಗಳೂರು ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಹಾಗೂ ಜೀವನೋಪಾಯ ಇಲಾಖೆ ಪ್ರಾಯೋಜಕತ್ವದಲ್ಲಿ ಸಿಡಾಕ್(ಕರ್ನಾಟಕ ಉದ್ಯಮಶೀಲತಾ ಕೇಂದ್ರ, ಧಾರವಾಡ) ಸಂಸ್ಥೆಯಿಂದ ಶಿಬಿರವನ್ನು ಆಯೋಜಿಸಲಾಗಿದ್ದು, ಸ್ವಂತ ಉದ್ಯೋಗವನ್ನು ಸ್ಥಾಪಿಸಲು ಇಚ್ಚಿಸುವ ಆಸಕ್ತರಿಗೆ ಪ್ರೇರಣೆ, ಸರ್ಕಾರ ಮತ್ತು ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ ಹಾಗೂ ಮುಂದೆ ಕೈಗೊಳ್ಳಲಾಗುವ ಉದ್ಯಮಶೀಲತಾ ತರಬೇತಿ ಕುರಿತು ಶಿಬಿರದಲ್ಲಿ ಮಾಹಿತಿ ನೀಡಲಾಗುವುದು.

ಭಾಗವಹಿಸಲು ಇಚ್ಚಿಸುವವರು 18 ವರ್ಷ ಮೇಲ್ಪಟ್ಟವರಾಗಿದ್ದು,  ಓದುವ ಮತ್ತು ಬರೆಯುವ ಸಾಮಥ್ರ್ಯವುಳ್ಳವರಾಗಿರಬೇಕು. ಆಸಕ್ತರು 2 ಪಾಸ್ ಪೋರ್ಟ್ ಅಳತೆಯ ಫೋಟೋ ಹಾಗೂ ಆಧಾರ್ ಕಾರ್ಡ್‍ದೊಂದಿಗೆ ಶಿಬಿರಕ್ಕೆ ಹಾಜರಾಗಬೇಕು.

ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಪ್ಲಾಟ್ ನಂ.76ಎ-(ಪಿ1), ಕರೂರು ಕೈಗಾರಿಕಾ ಪ್ರದೇಶ, ಪಿ.ಬಿ ರಸ್ತೆ, ದಾವಣಗೆರೆ, ದೂ.ಸಂ. ಹಾಗೂ ತರಬೇತುದಾರ ಬಸವರಾಜ ಜಿ.ಬಿ ಮೊ ನಂ. 9164742033 ಗೆ ಸಂಪರ್ಕಿಸಲು  ಸಿಡಾಕ್‍ನ  ಜಿಲ್ಲಾ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.