Kannada news - Suddi Mane is a live Kannada news portal offering Kannada news online, Movie News in Kannada, Sports News in Kannada, Business News In Kannada etc

‘ಫಸ್ಟ್ ನೈಟ್ ವಿತ್ ದೆವ್ವ’ ಚಿತ್ರದ ಟೀಸರ್ ಬಿಡುಗಡೆ

ಬಿಗ್ ಬಾಸ್ ಸೀಸನ್ 4ರ ವಿಜೇತ ನಟ ಪ್ರಥಮ್ ನಾಯಕನಾಗಿ ನಟಿಸಿರುವ ‘ಫಸ್ಟ್ ನೈಟ್ ವಿತ್ ದೆವ್ವ’ ದ ಟೀಸರ್ ಬಿಡುಗಡೆಯಾಗಿದೆ.

ನವೀನ್ ಬೀರಪ್ಪ ನಿರ್ಮಾಣ ಹಾಗೂ ಪಿ.ವಿ.ಆರ್ ಸ್ವಾಮಿ ಗೂಗಾರೆದೊಡ್ಡಿ ನಿರ್ದೇಶನ ಮಾಡಿರುವ ‘ಫಸ್ಟ್ ನೈಟ್ ವಿತ್ ದೆವ್ವ’ ಸಿನಿಮಾದಲ್ಲಿ ನಗು, ಹಾರಾರ್, ಕಾಮಿಡಿ, ಆಕ್ಷನ್ ಹಾಗೂ ಸೆಂಟಿಮೆಂಟ್ ಗಳನ್ನು ಒಳಗೊಂಡಿರುವ ಚಿತ್ರದಲ್ಲಿ ನಾಯಕ ನಟನಾಗಿ ಪ್ರಥಮ್, ನಾಯಕಿಯರಾಗಿ ನಿಖಿತ, ಜೀವಿತ ಹಾಗೂ ಸುಶ್ಮಿತ ಮೂವರು ನಟಿಸಿದ್ದಾರೆ. ಈ ಸಿನಿಮಾದ ಚಿತ್ರಕಥೆಯನ್ನು ಪ್ರಥಮ್ ಬರೆದಿರುತ್ತಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ರಮೇಶ್ ಭಟ್, ಹರೀಶ್ ರಾಜ್ ಮುಂತಾದವರು ತಾರಾಬಳಗದಲ್ಲಿದ್ದಾರೆ. ನವೆಂಬರ್ ನಲ್ಲಿ ಈ ಚಿತ್ರ ಆರಂಭವಾಗಿತ್ತು. ಚಿತ್ರ ಆರಂಭವಾದ ತಕ್ಷಣ ಮೊದಲು ಬರುವ ಸನ್ನಿವೇಶವೇ ಮದುವೆ ದೃಶ್ಯ. ಮದುವೆಯನ್ನು ಬಹಳ ಆಸೆಯಿಂದ ಆದ ಹುಡುಗನಿಗೆ ತನ್ನ ಮೊದಲರಾತ್ರಿ ನಡೆಯುತ್ತಿರುವುದು ದೆವ್ವದ ಜೊತೆಗೆ ಎಂದು ತಿಳಿದಾಗ ಏನೆಲ್ಲಾ ಆಗುತ್ತದೆ? ಎಂಬುದೆ ಚಿತ್ರದ ಕಥಾಸಾರಾಂಶ.