ಫೆ.16 ರಂದು ರಾಜ್ಯ ಬಜೆಟ್ ಮಂಡನೆ
ಬೆಂಗಳೂರು: ಫೆಬ್ರವರಿ 16 ರಂದು ರಾಜ್ಯ ಬಜೆಟ್ ಮಂಡನೆಯಾಗಲಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜ್ಯ ಬಜೆಟ್ ಮಂಡಿಸಲಿದ್ದಾರೆ.
ಫೆಬ್ರವರಿ 12 ರಿಂದ ಫೆಬ್ರವರಿ 23ರವರೆಗೆ ರಾಜ್ಯ ವಿಧಾನಮಂಡಲ ಅಧಿವೇಶನ ಹಾಗೂ ಫೆಬ್ರವರಿ 16ರಂದು ಕರ್ನಾಟಕ ರಾಜ್ಯ ಬಜೆಟ್ ಮಂಡನೆ ಮಾಡುವುದಾಗಿ ಇಂದು ನಡೆದ ಸಭೆಯಲ್ಲಿ ತೀರ್ಮಾನಿಸಲಾಗಿದೆ ಎಂದು ವರದಿಯಾಗಿದೆ.
ಇನ್ನು ವಿಧಾನಮಂಡಲ ಅಧಿವೇಶನ ಅಧಿವೇಶನದ ಮೊದಲ ದಿನವಾದ ಫೆ.12 ರಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಭಾಷಣ ಮಾಡಲಿದ್ದಾರೆ.